w
Headlines
Home » Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

ರಿಪ್ಪನ್‌ಪೇಟೆ : ಕೊಟ್ಟಿಗೆಗೆ ಸಂಬಂದಿಸಿದ ವಿಚಾರದಲ್ಲಿ ಚಿಕ್ಕಪ್ಪ ಹಾಗೂ ಚಿಕ್ಕಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ (ಕೆರೆಗೋಡು) ಗ್ರಾಮದ ನಿವಾಸಿ ಅರ್ಪಿತ್ (30) ಬಂಧಿತ ಆರೋಪಿಯಾಗಿದ್ದಾನೆ.

ಕೆರೆಗೋಡು ನಿವಾಸಿಗಳಾದ ಮುರುಗೇಶಪ್ಪ ಹಾಗೂ ಉಮಾ ದಂಪತಿಗಳ ಮೇಲೆ ದನದ ಕೊಟ್ಟಿಗೆಯ ವಿಚಾರದಲ್ಲಿ 07-11-2023 ರಂದು ಅರ್ಪಿತ್ ಏಕಾಏಕಿ ಮಧ್ಯರಾತ್ರಿ ಮನೆಗೆ ನುಗ್ಗಿ ಇಬ್ಬರ ಮೇಲೂ‌‌ ಮಾರಾಣಾಂತಿಕ ಹಲ್ಲೆ ನಡೆಸಿ ಮನೆಯಲ್ಲಿ‌ ವಸ್ತುಗಳನ್ನು ನಾಶಪಡಿಸಿದ್ದನು

ಗಾಯಗೊಂಡಿದ್ದ ಮುರುಗೇಶಪ್ಪ ಹಾಗೂ ಉಮಾ ರವರನ್ನು ರಿಪ್ಪನಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅಲ್ಲಿ ವೈದ್ಯರು ಇಲ್ಲದ ಕಾರಣ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು.ಘಟನೆಯಲ್ಲಿ ಮುರುಗೇಶ್ ರವರ ಬಲಗೈ ತುಂಡಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು ಆರೋಪಿ ಅರ್ಪಿತ್ ಪರಾರಿಯಾಗಿದ್ದನು ಇಂದು ಪಟ್ಟಣದ ಪಿಎಸ್‌ಐ ಪ್ರವೀಣ್ ನೇತ್ರತ್ವದ ಸಿಬ್ಬಂದಿಗಳ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ನ್ಯಾಯಲದ ಮುಂದೆ ಹಾಜರುಪಡಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.