Ripponpete | ಅನಾರೋಗ್ಯ ಹಿನ್ನಲೆ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಯಶವಂತ್ (19) ಮೃತಪಟ್ಟ ದುರ್ಧೈವಿಯಾಗಿದ್ದಾನೆ
ಅನಾರೋಗ್ಯ ಹಿನ್ನಲೆಯಲ್ಲಿ ಮನನೊಂದು ಶನಿವಾರ ಮಧ್ಯಾಹ್ನ ವಿಷ ಸೇವಿಸಿದ್ದಾನೆ ತಕ್ಷಣ ಕುಟುಂಬಸ್ಥರು ಯುವಕನನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆ ತಂದು ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದರು.ಚಿಕಿತ್ಸೆ ಫಲಕಾರಿಯಾಗದ ಹಿನ್ನಲೆಯಲ್ಲಿ ಯುವಕನು ಭಾನುವಾರ ತಡರಾತ್ರಿ ಮೃತಪಟ್ಟಿದ್ದಾನೆ.
ಯುವಕನು ಶಿವಮೊಗ್ಗದ ಪ್ಯಾರ ಮೆಡಿಕಲ್ ಕಾಲೇಜಿನಲ್ಲಿ ಪ್ರಥಮ ವರ್ಷ ವಿದ್ಯಾರ್ಥಿಯಾಗಿದ್ದನು.
ಬಡ ಕುಟುಂಬದ ಈ ಯುವಕನಿಗೆ ಕೆಲವು ದಿನಗಳಿಂದ ಅನಾರೋಗ್ಯ ಹೆಚ್ಚಾದ ಹಿನ್ನಲೆಯಲ್ಲಿ ಸೂಕ್ತ ಚಿಕಿತ್ಸೆ ಪಡೆಯಲು ಹಣಕಾಸಿನ ಮುಗ್ಗಟ್ಟು ಎದುರಾಗಿ ಕುಟುಂಬಕ್ಕೆ ಮತ್ತಷ್ಟು ಹೊರೆಯಾಗಬಾರದು ಎಂಬ ಕಾರಣದಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
		 
                         
                         
                         
                         
                         
                         
                         
                         
                         
                        

