Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ
ರಿಪ್ಪನ್‌ಪೇಟೆ – ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಲೈಂಗಿಕ ದೌರ್ಜನ್ಯದಿಂದ ಮನನೊಂದು ಅಪ್ರಾಪ್ತೆ ನೇಣುಹಾಕಿಕೊಂಡು ಮೃತಪಟ್ಟ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ರೂ.1,25 ಲಕ್ಷ ದಂಡ ವಿಧಿಸಿ FTSC -1 ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೇ ಮೃತ ಬಾಲಕಿ ಕುಟುಂಬಕ್ಕೆ ರೂ.17 ಲಕ್ಷ ಪರಿಹಾರ ನೀಡಲು ಸರ್ಕಾರಕ್ಕೆ ಆದೇಶ ನೀಡಿದೆ.
2020ನೇ ಸಾಲಿನಲ್ಲಿ ತೀರ್ಥಹಳ್ಳಿ ತಾಲ್ಲೂಕಿನ 23 ವರ್ಷದ ಯುವಕನೊಬ್ಬನು 16 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಇದರಿಂದ ಮನನೊಂದ ಬಾಲಕಿಯು ನೇಣು ಹಾಕಿ ಕೊಂಡು ಮೃತಪಟ್ಟಿರುತ್ತಾಳೆಂದು ಮೃತ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು.
ಸದರಿ ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿ ಗಿರೀಶ್ ಬಿ.ಸಿ, ಪೊಲೀಸ್ ವೃತ್ತ ನಿರೀಕ್ಷಕರು, ಹೊಸನಗರ ವೃತ್ತ ರವರು ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದು, ಸರ್ಕಾರದ ಪರವಾಗಿ ಹರಿಪ್ರಸಾದ್ ಮತ್ತು ಶ್ರೀಮತಿ ಮಮತ ಸರ್ಕಾರಿ ಅಭಿಯೋಜಕರು ಪ್ರಕರಣದ ವಾದ ಮಂಡಿಸಿದ್ದು FTSC-1 ನ್ಯಾಯಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಲಾಗಿತ್ತು.
ಆರೋಪಿಯ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಶ್ರೀಮತಿ ಲತಾ ದಿನಾಂಕಃ 04-11-2023 ರಂದು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1,25,000/- ರೂ ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಹಾಗೂ ಮೃತ ಬಾಲಕಿಯ ಕುಟುಂಬಸ್ಥರಿಗೆ ಪರಿಹಾರವಾಗಿ ಸರ್ಕಾರದಿಂದ 17,00,000/- ನೀಡಲು ಆದೇಶಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್