Ripponpete | ಕನಕದಾಸರು ಜಾತ್ಯತೀತ ದಾರ್ಶನಿಕರಾಗಿದ್ದರು – ಜನಾರ್ಧನ್ ಬಿ ನಾಯಕ್

ಕನಕದಾಸರು ಜಾತ್ಯತೀತ ದಾರ್ಶನಿಕರಾಗಿದ್ದರು – ಜನಾರ್ಧನ್ ಬಿ ನಾಯಕ್
ರಿಪ್ಪನ್ ಪೇಟೆ : ಜಗತ್ತು ಕಂಡ ಸರ್ವ ಶ್ರೇಷ್ಠ ಮಾನವತಾವಾದಿ ಜಾತಿ ವ್ಯವಸ್ಥೆಯನ್ನು ವಿರೋಧಿಸುತ್ತಿದ್ದ ಕನಕದಾಸರು ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆ ಏನಾದರೂ ಬಲ್ಲಿರಾ? ಎಂದು ಹಾಡಿ ಜಾತ್ಯತೀತ ದಾರ್ಶನಿಕರಾಗಿ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ಉಪನ್ಯಾಸಕ  ಜನಾರ್ಧನ್.ಬಿ.ನಾಯಕ್ ಹೇಳಿದರು.

ಗುರುವಾರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಹಮ್ಮಿಕೊಂಡ ಕನಕ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಸಮಾಜದಲ್ಲಿ ಸಮಾನತೆ ಪ್ರತಿಪಾದಿಸಿದ ದಾಸ ಶ್ರೇಷ್ಠ ಕನಕದಾಸರನ್ನು ಕೇವಲ ಒಂದು ಜಾತಿಗೆ ಸೀಮಿತವಾಗಿ ಮಾಡದೇ ಮನುಕುಲದ ಉದ್ಧಾರಕ ಎಂದು ಭಾವಿಸಬೇಕು. ಕನಕರು ಓರ್ವ ತತ್ವಜ್ಞಾನಿಯಾಗಿ, ಸಮಾಜ ಸುಧಾರಕರಾಗಿ, ದಾಸ ಶ್ರೇಷ್ಠರಾಗಿ, ಕೀರ್ತನೆಕಾರರಾಗಿ ಅವರು ನೀಡಿದ ಕೊಡುಗೆಗಳು ಸರ್ವಕಾಲಿಕ ಸತ್ಯವಾಗಿದೆ ಎಂದರು.

ಉಪನ್ಯಾಸಕ ಈಶ್ವರ್ ಮಾತನಾಡಿ, ಕನಕ ದಾಸರ ವಿಚಾರಧಾರೆಗಳನ್ನು‌ ಪ್ರತಿಯೊಬ್ಬರು ಅರಿಯಬೇಕಿದೆ. ಈ ನಿಟ್ಟಿನಲ್ಲಿ‌ ಕನಕದಾಸರ ಜಯಂತಿ ಆಚರಣೆ ಮಾಡುವುದು ಮತ್ತು ಮಕ್ಕಳು ಸಹ ಕನಕದಾಸರ ಬಗ್ಗೆ ಅರಿತುಕೊಳ್ಳಲು ಪಠ್ಯ ಪುಸ್ತಕಗಳಲ್ಲಿ ಅವರ ಜೀವನ ವಿಚಾರೆಧಾರೆಗಳನ್ನು ಸೇರ್ಪಡಿಸಲಾಗಿದೆ ಎಂದರು.

ಉಪನ್ಯಾಸಕ ಸಬಾಸ್ಟಿನ್ ಸೇರಿದಂತೆ ಕಾಲೇಜಿನ ಉಪನ್ಯಾಸಕ ವರ್ಗದವರು ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇತರರಿದ್ದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

4 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

5 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

9 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

13 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

16 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago