ಶಿವಮೊಗ್ಗ : ಇತ್ತೀಚೆಗೆ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಮೊಟ್ಟೆ ಬಲವಂತವಾಗಿ ಮೊಟ್ಟೆ ತಿನ್ನಿಸುತ್ತಿರುವ ಆರೋಪ ಕೇಳಿ ಬಂದಿತ್ತು.ನಂತರ ಈ ಬಗ್ಗೆ ಪೋಷಕರು ದೂರು ದಾಖಲಿಸಿದ್ದರು ಆ ನಂತರ ಹಿರಿಯ ಅಧಿಕಾರಿಗಳೆಲ್ಲಾ ಶಾಲೆಗೆ ಭೇಟಿ ನೀಡಿ ಶಿಕ್ಷಕನ ಬಳಿ ಕ್ಷಮೆ ಕೇಳಿಸಿ ಪ್ರಕರಣಕ್ಕೆ ತೇಪೆ ಹಚ್ಚುವ ಕೆಲಸವನ್ನು ಮಾಡಿದ್ದರು ಈ ಬಗ್ಗೆ ಈಗ ರಾಜ್ಯ ಸರ್ಕಾರದ ವಿರುದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಿಡಿ ಕಾರುತ್ತಿದೆ.
ಸಚಿವ ಮಧುಬಂಗಾರಪ್ಪಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಈ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಶಾಲಾ ವಿದ್ಯಾರ್ಥಿನಿಗೆ ಬಲವಂತವಾಗಿ ಕೋಳಿಮೊಟ್ಟೆ ತಿನ್ನಿಸುತ್ತಿದ್ದಾರೆ ಎಂಬುದು ತಿಳಿದ ಪಾಲಕರೂ ಬೇಸರಗೊಂಡಿದ್ದಾರೆ. ಆಹಾರ ಪದ್ದತಿ ವೈಯುಕ್ತಿಕ ವಿಚಾರ ಇದನ್ನು ಅಡ್ಡಿಪಡಿಸುವಂತಿಲ್ಲ ಎಂದು ಹೇಳಿದ್ದಾರೆ.
ವ್ಯಕ್ತಿಗಳ ಧಾರ್ಮಿಕ ಆಚರಣೆ, ಆಹಾರ ಪದ್ದತಿಗೆ ಯಾರೂ ಅಡ್ಡಿಪಡಿಸುವಂತಿಲ್ಲ. ಕಟ್ಟಾ ಸಸ್ಯಹಾರಿ ವಿದ್ಯಾರ್ಥಿನಿಗೆ ಇಷ್ಟವಿಲ್ಲದ ಆಹಾರ ತಿನ್ನಲು ಬಲವಂತಿಸುವುದು ತರವಲ್ಲ. ಅದರಲ್ಲೂ ಶಾಲೆಗಳಲ್ಲಿ ಎಳೆವಯಸ್ಸಿನ ಮಕ್ಕಳ ಮೇಲೆ ಅಗಾಧ ಪರಿಣಾಮ ಬೀರುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.
ಈ ಸಂಬಂಧ ಶಿವಮೊಗ್ಗ ಡಿಡಿಪಿಐಗೆ ದೂರು ನೀಡಲಾಗಿದೆ. ಘಟನೆಗೆ ಸಂಬಂಧಿಸಿದ ಶಿಕ್ಷಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂತು ಒತ್ತಾಯಿಸಲಾಗಿದೆ. ಪತ್ರದ ಮೂಲಕ ಶಿಸ್ತುಕ್ರಮಕ್ಕೆ ಒತ್ತಾಯಿಸಿದ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಳ್ಳಿ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಕೂಡಲೇ ಘಟನೆಗೆ ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಉಗ್ರ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ. ಯಾವುದೇ ವಿದ್ಯಾರ್ಥಿಗಳಿಗೂ ಸಹ ಅವರ ಆಹಾರ ಪದ್ಧತಿಯ ವಿರುದ್ಧವಾಗಿ ಏನನ್ನೂ ತಿನ್ನಿಸಬಾರದು ಎಂದು ಹೇಳಲಾಗುತ್ತಿದೆ. ಈ ರೀತಿ ಮಾಡಿರುವುದು ತಪ್ಪು ಎಂದು ಖಂಡಿಸಿದ್ದಾರೆ.