Ripponpete | ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಪ್ರಕರಣ – ಶಿಕ್ಷಣ ಸಚಿವರಿಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಶಿವಮೊಗ್ಗ : ಇತ್ತೀಚೆಗೆ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಮೊಟ್ಟೆ ಬಲವಂತವಾಗಿ ಮೊಟ್ಟೆ ತಿನ್ನಿಸುತ್ತಿರುವ ಆರೋಪ ಕೇಳಿ ಬಂದಿತ್ತು.ನಂತರ ಈ ಬಗ್ಗೆ ಪೋಷಕರು ದೂರು ದಾಖಲಿಸಿದ್ದರು ಆ ನಂತರ ಹಿರಿಯ ಅಧಿಕಾರಿಗಳೆಲ್ಲಾ ಶಾಲೆಗೆ ಭೇಟಿ ನೀಡಿ ಶಿಕ್ಷಕನ ಬಳಿ ಕ್ಷಮೆ ಕೇಳಿಸಿ ಪ್ರಕರಣಕ್ಕೆ ತೇಪೆ ಹಚ್ಚುವ ಕೆಲಸವನ್ನು ಮಾಡಿದ್ದರು ಈ ಬಗ್ಗೆ ಈಗ ರಾಜ್ಯ ಸರ್ಕಾರದ ವಿರುದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಿಡಿ ಕಾರುತ್ತಿದೆ.
ಸಚಿವ ಮಧುಬಂಗಾರಪ್ಪಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಈ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಶಾಲಾ ವಿದ್ಯಾರ್ಥಿನಿಗೆ ಬಲವಂತವಾಗಿ ಕೋಳಿ‌ಮೊಟ್ಟೆ ತಿನ್ನಿಸುತ್ತಿದ್ದಾರೆ ಎಂಬುದು ತಿಳಿದ ಪಾಲಕರೂ ಬೇಸರಗೊಂಡಿದ್ದಾರೆ. ಆಹಾರ ಪದ್ದತಿ ವೈಯುಕ್ತಿಕ ವಿಚಾರ ಇದನ್ನು ಅಡ್ಡಿಪಡಿಸುವಂತಿಲ್ಲ ಎಂದು ಹೇಳಿದ್ದಾರೆ.

ವ್ಯಕ್ತಿಗಳ ಧಾರ್ಮಿಕ ಆಚರಣೆ, ಆಹಾರ ಪದ್ದತಿಗೆ ಯಾರೂ ಅಡ್ಡಿಪಡಿಸುವಂತಿಲ್ಲ. ಕಟ್ಟಾ ಸಸ್ಯಹಾರಿ ವಿದ್ಯಾರ್ಥಿನಿಗೆ ಇಷ್ಟವಿಲ್ಲದ ಆಹಾರ ತಿನ್ನಲು ಬಲವಂತಿಸುವುದು ತರವಲ್ಲ. ಅದರಲ್ಲೂ ಶಾಲೆಗಳಲ್ಲಿ ಎಳೆವಯಸ್ಸಿನ ಮಕ್ಕಳ ಮೇಲೆ ಅಗಾಧ ಪರಿಣಾಮ ಬೀರುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಈ ಸಂಬಂಧ ಶಿವಮೊಗ್ಗ ಡಿಡಿಪಿಐಗೆ ದೂರು ನೀಡಲಾಗಿದೆ. ಘಟನೆಗೆ ಸಂಬಂಧಿಸಿದ ಶಿಕ್ಷಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂತು ಒತ್ತಾಯಿಸಲಾಗಿದೆ. ಪತ್ರದ ಮೂಲಕ ಶಿಸ್ತುಕ್ರಮಕ್ಕೆ ಒತ್ತಾಯಿಸಿದ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್​ ಹಾರನಳ್ಳಿ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಕೂಡಲೇ ಘಟನೆಗೆ ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಉಗ್ರ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ. ಯಾವುದೇ ವಿದ್ಯಾರ್ಥಿಗಳಿಗೂ ಸಹ ಅವರ ಆಹಾರ ಪದ್ಧತಿಯ ವಿರುದ್ಧವಾಗಿ ಏನನ್ನೂ ತಿನ್ನಿಸಬಾರದು ಎಂದು ಹೇಳಲಾಗುತ್ತಿದೆ. ಈ ರೀತಿ ಮಾಡಿರುವುದು ತಪ್ಪು ಎಂದು ಖಂಡಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

6 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

7 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

11 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

15 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

18 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago