POSTMAN NEWS

ನೈಜ ಸುದ್ದಿ ನೇರ ಬಿತ್ತರ..

Ripponpete | ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಆಯುಷ್

Ripponpete | ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಆಯುಷ್

ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ಸ್‌ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಆಯುಷ್ ಎಸ್ ಆರ್ ಉತ್ತಮ ಸಾಧನೆ ತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಶುಕ್ರವಾರ ಹಾಗೂ ಶನಿವಾರ ನಡೆದ 17 ವರ್ಷ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 100 ಮೀಟರ್ ಓಟದಲ್ಲಿ ದ್ವಿತೀಯ, 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಹಾಗೂ ತ್ರಿಬಲ್ ಜಂಪ್‌ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನವೆಂಬರ್ 17 ಹಾಗೂ 18 ರಂದು ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯ SSLC ವಿದ್ಯಾರ್ಥಿ ಆಯುಷ್ ಎಸ್ ಆರ್.


ಪಟ್ಟದ ಶ್ರೀರಾಮ ನಗರದ ನಿವಾಸಿಗಳಾದ ರಾಘವೇಂದ್ರ ಹಾಗೂ ಮಂಜುಳಾ ದಂಪತಿಗಳ ಪುತ್ರನಾದ ಆಯುಷ್ ಅದ್ವಿತೀಯ ಸಾಧನೆ ತೋರುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಆಯುಷ್ ಎಸ್ ಆರ್ ರವರಿಗೆ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಪ್ರಶಾಂತ್ ಹಾಗೂ ಸದಸ್ಯರು ,ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕರ ವೃಂದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.