Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ|

Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ತೊಂದರೆ ನೀಡಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ|

ಕಾಡು ಕೋಣ, ಜಿಂಕೆ, ಅಕ್ರಮ ನಾಡು ಬಂದೂಕು, ಶ್ರೀಗಂಧ ಸಂಗ್ರಹಣೆ ಮಾಡಿದ್ದ ಆರೋಪಿಗಳನ್ನು ರಕ್ಷಿಸಲು ಶಾಸಕ ಆರಗ ಜ್ಞಾನೇಂದ್ರ ಅರಣ್ಯಾಧಿಕಾರಿಗಳ ಬೆದರಿಸಿ ದರ್ಪ ಮೆರೆದಿದ್ದಾರೆ. ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕೆಪಿಸಿಸಿ ವನ್ಯಜೀವಿ ವಿಭಾಗದಿಂದ ಶಿವಮೊಗ್ಗ ಡಿಸಿಎಫ್‌ಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆಕಟ್ಟೆ ಬಳಿಯ ಬಸವನಗದ್ದೆ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಕಾಡುಕೋಣ, ಜಿಂಕೆ ಕೊಂಬುಗಳು, ನಾಡಬಂದೂಕು ಹಾಗೂ ಗಂಧದ ತುಂಡುಗಳನ್ನು ಮನೆಯ ನೆಲಮಾಳಿಗೆಯಲ್ಲಿ ಸಂಗ್ರಹಿಸಲ್ಪಟ್ಟಿದ್ದ ಬಗ್ಗೆ ಬಂದ ದೂರು ಆಧರಿಸಿ ಅರಣ್ಯಾಧಿಕಾರಿ ಮನೆ ತಪಾಸಣೆಗೆ ಮುಂದಾದಾಗ ಅಲ್ಲಿಗೆ ಬಂದ ಶಾಸಕ ಆರಗ ಜ್ಞಾನೇಂದ್ರ ಗೂಂಡಾ ವರ್ತನೆ ತೋರಿದ್ದಾರೆ ಎಂದು ಕೆಪಿಸಿಸಿ ಮುಖಂಡರು ಆರೋಪಿಸಿದರು.

ಪ್ರಕರಣದಲ್ಲಿ ಅರಣ್ಯಾಧಿಕಾರಿಗಳು ಎಫ್‌ಐಆರ್ ದಾಖಲಿಸುವ ಮೊದಲೇ ಶಾಸಕರು ಬಿ ರೀಪೋರ್ಟ್ ಕೊಟ್ಟಿದ್ದಾರೆ. ಅವರ ವರ್ತನೆ ನೋಡಿದರೆ, ಮುಂದಿನ ದಿನಗಳಲ್ಲಿ ಕಾಡುಪ್ರಾಣಿಗಳ ಬೇಟೆಗಾರರು ಯಾವುದೇ ಭಯವಿಲ್ಲದೇ ಪ್ರಾಣಿಗಳನ್ನು ಕೊಂದು ಅದರ ಮಾಂಸ ಮತ್ತು ಅಂಗಗಳನ್ನು ಮಾರಿಕೊಳ್ಳುವ ದಿನಗಳು ದೂರ ಇಲ್ಲ. ಪ್ರಾಣಿಗಳ ಕೊಂಬು ಮತ್ತು ಅಂಗಗಳನ್ನು ಸಂಗ್ರಹಿಸಿದ್ದ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು. ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಆರೋಪಿಯ ರಕ್ಷಿಸಿದ ತೀರ್ಥಹಳ್ಳಿ ಶಾಸಕರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಮೆಹಕ್ ಷರೀಪ್, ಎಸ್.ಎನ್.ಮೂರ್ತಿ, ಪರ್ವಿಜ್ ಅಹಮ್ಮದ್, ಮೊಹಮ್ಮದ್ ಹುಸೇನ್, ಎಸ್.ಎ. ಬಾಬು, ಸಂದೀಪ್, ಮಾನಸ, ಬಾಲಾಜಿ, ಷಾಮೀರ್‌ಖಾನ್, ಯಮುನಾ ರಂಗೇಗೌಡ ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

5 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

12 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

13 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

17 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

21 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

24 hours ago