Shivamogga |ಕಾಲೇಜು ವಿದ್ಯಾರ್ಥಿ ಮೇಲೆ ಬಿಸಿ ಎಣ್ಣೆ ಎರಚಿ ಕುಡುಕನ ರಾದ್ದಾಂತ
ಕಬಾಬ್ ಅಂಗಡಿ ಮಾಲೀಕನ ಜೊತೆ ಜಗಳವಾಡುತ್ತಿದ್ದ ವೇಳೆ ಪಾನಮತ್ತ ಗ್ರಾಹಕನೊಬ್ಬ ಕಾಲೇಜು ವಿದ್ಯಾರ್ಥಿ ಮೇಲೆ ಎಣ್ಣೆ ಸುರಿದಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಕಬಾಬ್ ಮಾಲೀಕನ ಜೊತೆಗೆ ಪಾನಮತ್ತನಾಗಿದ್ದ ಗ್ರಾಹಕನೊಬ್ಬ ಜಗಳವಾಡುತಿದ್ದು ಅದು ವಿಕೋಪಕ್ಕೆ ತಿರುಗಿದಾಗ ಸಿಟ್ಟಿಗೆದ್ದು ವಿದ್ಯಾರ್ಥಿ ಒಬ್ಬನ ಮೇಲೆ ಪಾನಮತ್ತ ಗ್ರಾಹಕ ಬಿಸಿ ಎಣ್ಣೆ ಎರಚಿದ್ದಾನೆ.
ಮಾಲೀಕನ ಮೇಲೆ ಪಾನಮತ್ತ ಗ್ರಾಹಕ ಎಣ್ಣೆ ಎರಚಲು ಯತ್ನಿಸಿದ್ದಾನೆ. ಆದರೆ ಜರಡಿಯಿಂದ ವಿದ್ಯಾರ್ಥಿ ಮೇಲೆ ಪಾನಮತ ವ್ಯಕ್ತಿ ಎಣ್ಣೆ ಎರಚಿದ್ದಾನೆ.
ಮೈಮೇಲೆ ಬಿಸಿ ಎಣ್ಣೆ ಬಿದ್ದಿದ್ದರಿಂದ ವಿದ್ಯಾರ್ಥಿ ಧನುಷ್ ಜೋರಾಗಿ ಚಿರಾಡಿದ್ದಾನೆ. ನಂತರ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೆ ವೇಳೆ ಕುಡುಕನ ಕಿರಿಕ್ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರ ವಾಹನದ ಕೆಳಗೆ ಪಾನಮತ್ತ ವ್ಯಕ್ತಿ ಅಡಗಿ ಕುಳಿತಿದ್ದಾನೆ.ವಾಹನದ ಅಡಿಗೆ ನುಗ್ಗಿ ಕೆಲವು ಹೊತ್ತು ಪೊಲೀಸರನ್ನು ಕುಡುಕ ಕಾಡಿದ್ದಾನೆ. ನಂತರ ಆಂಬುಲೆನ್ಸ್ ಮೂಲಕ ಪೊಲೀಸರು ಆಸ್ಪತ್ರೆಗೆ ಕರೆದು ಹೋಗಿದ್ದಾರೆ.ವಿದ್ಯಾರ್ಥಿ ಧನುಷ್ ಹಾಗೂ ಪಾನಮತ್ತ ವ್ಯಕ್ತಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್