Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ
ಶಿವಮೊಗ್ಗ : ದರೋಡೆಗೆ ಹೊಂಚು ಹಾಕಿ ನಿಂತಿದ್ದ ಯುವಕರನ್ನ ದೊಡ್ಡಪೇಟೆ ಪೊಲೀಸರು ಬಂಧಿಸಿ, 2 ಸ್ಟೀಲ್ ಡ್ರಾಗನ್, ಕಬ್ಬಿಣದ ರಾಡು ಹಾಗೂ ಲಾಂಗ್ ವಶಪಡಿಸಿಕೊಂಡಿದ್ದಾರೆ.
ಹೋಟೆಲ್ ಕಾರ್ಮಿಕ, ಭದ್ರಾವತಿ ತಾಲೂಕಿನ ಬಾಬಳ್ಳಿ ಗ್ರಾಮದ ದೇವರಾಜ್ (31), ಕೋಟೆಗಂಗೂರಿನ ಸಾಗರ್ ಯಾನೆ ಶಬರೀಶ್ (22), ಭದ್ರಾವತಿ ಎಪಿಎಂಸಿ ಅಡಕೆ ಮಂಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ಯಾನೆ ಕುಮಾರ (38), ರಾಗಿಗುಡ್ಡದ ಶೇಯಸ್ (22) ಬಂಧಿತ ಆರೋಪಿಗಳಾಗಿದ್ದು ಕೋಟೆಗಂಗೂರಿನ ಸಂತೋಷ್ ಎಂಬಾಂತ ತಲೆಮರೆಸಿಕೊಂಡಿದ್ದಾನೆ.
ನಗರದ ಎನ್.ಟಿ. ರಸ್ತೆಯ ಫಲಕ್ ಶಾದಿ ಮಹಲ್ ಪಕ್ಕದಲ್ಲಿ ನಾಲ್ಕೈದು ಜನ ಯುವಕರ ಗುಂಪೊಂದು ಭಾರಿ ಅನಾಹುತ ಸೃಷ್ಠಿಸಲು ಮುಂದಾಗಿತ್ತು. ಎನ್.ಟಿ. ರಸ್ತೆಯ ಫಲಕ್ ಶಾದಿ ಮಹಲ್‌ನ ಪಕ್ಕದ ಖಾಲಿ ಜಾಗದಲ್ಲಿ, ಹೊಂದಿಕೊಂಡಿರುವ ರಸ್ತೆಯಲ್ಲಿ ಓಡಾಡುವ ಜನರು ಮತ್ತು ವಾಹನಗಳನ್ನು ತಡೆದು ದರೋಡೆಗೆ ಹೊಂಚು ಹಾಕುತ್ತಿದ್ದರು.
ಈ ಬಗ್ಗೆ ಮಾಹಿತಿ ಹಿನ್ನಲೆ ಪಿಎಸ್‌ಐ ವಸಂತ್ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಆಗ ನಾಲೈದು ಜನರು ಅಪಾಯಕರವಾದ ಆಯುಧಗಳನ್ನು ಹಿಡಿದು, ಸುಲಿಗೆ ಉದ್ದೇಶದಿಂದ ಹೊಂಚು ಹಾಕುತ್ತಿರುವುದು ತಿಳಿದುಬಂದಿದೆ. ಈ ಸಂದರ್ಭ ಆಯುಧಗಳ ಸಮೇತ 4 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ಓರ್ವ ತಪ್ಪಿಸಿಕೊಂಡಿದ್ದಾನೆ.
ಹಣದ ಆಸೆಗೆ ಈ ರೀತಿ ಕೃತ್ಯ ಮಾಡಿದ್ಯಾಗಿ ವಿಚಾರದಲ್ಲಿ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಬಂಧಿತರಿಂದ ಕಬ್ಬಿಣದ ರಾಡು, ಮರದ ಹಿಡಿ ಇರುವ ಮಚ್ಚು, 50 ಗ್ರಾಂ ತೂಕದ ಖಾರದ ಪುಡಿ ಇರುವ ಕವರ್, 2 ಸ್ಟೀಲ್ ಡ್ರಾಗನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್