ಶಿವಮೊಗ್ಗ ಮಲ್ಲೇಶ್ ಹತ್ಯೆ ಪ್ರಕರಣ – ನಾಲ್ವರ ಬಂಧನ ; ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು..?
ಶಿವಮೊಗ್ಗ (Shivamogga) ನಗರದ ಗುಡ್ಡೆ ಕಲ್ ದೇವಸ್ಥಾನದ ಸಮೀಪ, ಚಿಕ್ಕಲ್ನಲ್ಲಿ ನಡೆದ ಮಲ್ಲೇಶ್ ಅಲಿಯಾಸ್ ಮಲ್ಲಿ ಅಲಿಯಾಸ್ ಮಲ್ಲನ ಕೊಲೆ(murder) ಪ್ರಕರಣ ಸಂಬಂಧ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ನಿನ್ನೆ ಚಿಕ್ಕಲ್ನಲ್ಲಿ ನಡೆದ ಘಟನೆ ಸಂಬಂಧ ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಏಳು ಜನರ ದುಷ್ಕರ್ಮಿಗಳ ತಂಡ ಘಟನೆಯಲ್ಲಿ ಪಾಲ್ಗೊಂಡಿದ್ದು, ಈ ಸಂಬಂಧ ಮೂವರಿಗಾಗಿ ಹುಡುಕಾಟ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಪ್ರಕರಣ ಕುರಿತಾಗಿ ಮಾಹಿತಿ ನೀಡಿರುವ ಎಸ್ ಪಿ ಮಿಥುನ್ ಕುಮಾರ್ ಪ್ರಕರಣದಲ್ಲಿ ಆರೋಪಿಗಳು ಹಾಗೂ ಕೊಲೆಯಾದ ವ್ಯಕ್ತಿಯು ಸಂಬಂಧಿಕರಾಗಿದ್ದಾರೆ. ಹುಡುಗಿಯೊಬ್ಬಳನ್ನು ಕೊಲೆಯಾದ ಮಲ್ಲ ಪ್ರೀತಿಸ್ತಿದ್ದ. ಆದರೆ ವಯಸ್ಸಿನ ಕಾರಣಕ್ಕೆ ಆತನಿಗೆ ಹುಡುಗಿಯನ್ನ ನೀಡಲು ವಿರೋಧವಿತ್ತು.
ಆದಾಗ್ಯು ಮಲ್ಲ ಹುಡುಗಿಯನ್ನ ತನ್ನನ್ನು ಪ್ರೀತಿಸುವಂತೆ ಪೀಡಿಸ್ತಿದ್ದ. ಇದೆ ಕಾರಣಕ್ಕೆ ಆ ಹುಡುಗಿ ಆತ್ಮಹತ್ಯೆಮಾಡಿಕೊಂಡಿದ್ದಳು. ಸಹೋದರಿಯ ಸಾವಿನ ಹಿನ್ನೆಲೆಯಲ್ಲಿ ಸಹೋದರರು ಮಲ್ಲನನ್ನ ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್