ಶಿವಮೊಗ್ಗ ಜಿಲ್ಲೆಯಿಂದ ವಿಮಾನಯಾನ ಸೇವೆ ಆರಂಭಸಿಲು ಸಜ್ಜಾಗಿರುವ ಸ್ಟಾರ್ ಏರ್ (STAR AIR) ಸಂಸ್ಥೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಜ್ಜಾಗಿದೆ. ನ.6ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿರುವ ರಾಯಲ್ ಆರ್ಕಿಡ್ ಹೊಟೇಲ್‌ನಲ್ಲಿ ಸಂದರ್ಶನ ನಡೆಸಲಿದೆ. ಈ ಕುರಿತು ಸ್ಟಾರ್ ಏರ್ ಸಂಸ್ಥೆ ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಪ್ರಕಟಿಸಿದೆ.
ಸ್ಟಾರ್ ಏರ್ ಸೋಶಿಯಲ್ ಮೀಡಿಯಾದಲ್ಲಿ ನೀಡಿದ ಜಾಹಿರಾತಿನ ಪ್ರಕಾರ, ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಕಮರ್ಷಿಯಲ್ ವಿಭಾಗದಲ್ಲಿ ಡ್ಯೂಟಿ ಸೂಪರ್‌ವೈಸರ್ ಅಥವಾ ಆಫೀಸರ್, ಸೀನಿಯರ್ ಕಸ್ಟಮರ್ ಸರ್ವಿಸ್ ಎಗ್ಸಿಕ್ಯೂಟಿವ್, ಕಸ್ಟಮರ್ ಸರ್ವಿಸ್ ಎಗ್ಸಿಕ್ಯೂಟಿವ್, ಟ್ರೈನಿ ಕಸ್ಟಮರ್ ಸರ್ವಿಸ್ ಎಗ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್