Headlines

Sigandoor | ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ : ಕೆಳಗೆ ಬಿದ್ದು ಕಾರ್ಮಿಕ ಸಾವು

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು

ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ದಿಲೀಪ್ ಬಿಲ್ಡ್ ಕಂಪನಿಯ ಕಾರ್ಮಿಕ ಪಶ್ಚಿಮ ಬಂಗಾಳದ ರಬಿ ಉಲ್ ಇಸ್ಮಾಯಿಲ್(42) ಮೃತಪಟ್ಟ ವ್ಯಕ್ತಿ.

ಸೇತುವೆ ಕಾಮಗಾರಿ ಕೆಲಸ ನಿರ್ವಹಿಸುವ ವೇಳೆ ಮೂರ್ಛೆ ಬಂದು ಕೆಳಗೆ ಬಿದ್ದಿದ್ದ ಅವರನ್ನು ತುರ್ತು ಚಿಕಿತ್ಸೆಗಾಗಿ ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. 
ಮೃತ ಕಾರ್ಮಿಕನ ಸಹೋದರ ತಾಜಿನ್ ಅಲಿ ಸಾಗರ ಗ್ರಾಮಂತರ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

About The Author

Leave a Reply

Your email address will not be published. Required fields are marked *