Thirthahalli | ಕಾಣೆಯಾಗಿದ್ದ ವ್ಯಕ್ತಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರದ ನಿವಾಸಿ ರವಿ ಎಲ್ ಗೌಡ (55 ) ಎಂಬುವವರ ಶವ ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊದಲ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದೆ.
ರವಿ ಗೌಡ ಶುಕ್ರವಾರ ಸಂಜೆಯಿಂದ ಕಾಣೆಯಾಗಿದ್ದು ಕುಟುಂಬಸ್ಥರು ಎಲ್ಲಾ ಕಡೆ ಹುಡುಕಿ ನಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಆದರೆ ಇಂದು ಶವವಾಗಿ ಪತ್ತೆಯಾಗಿದ್ದಾರೆ.
ರವಿ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಇವರ ಸಾವಿಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.