ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ
ಚಂದನವನದ ಹಿರಿಯ ಹಾಗೂ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾದರು.
ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತಾದರೂ ಶುಕ್ರವಾರ ಮಧ್ಯಾಹ್ನ ದಿಢೀರ್ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲೀಲಾವತಿ ಕೊನೆಯುಸಿರೆಳೆದರು.
ಲೀಲಾವತಿ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದರು. ಅವರ ಆರೋಗ್ಯ (Health) ಯೋಗ ಕ್ಷೇಮ ವಿಚಾರಿಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಶಿವರಾಜ್ಕುಮಾರ್ ದಂಪತಿ, ದರ್ಶನ್, ಗಿರಿಜಾ ಲೋಕೇಶ್ ಮೊದಲಾದವರು ಲೀಲಾವತಿ ಅಚರ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದ ಮನೆಗೆ ಭೇಟಿ ನೀಡಿದ್ದರು.
ಕನ್ನಡದಲ್ಲಿ ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ಅಭಿನಯಿಸಿದ್ದರು.