Headlines

ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ

ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ

ರಿಪ್ಪನ್‌ಪೇಟೆ : ಗರ್ತಿಕೆರೆ ಸಮೀಪದ ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ಡಿ.18ರ ಸೋಮವಾರ 17ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ಆಯೋಜಿಸಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ದೇವಸ್ಥಾನದ ವ್ಯವಸ್ಥಾಪಕರಾದ ಸುನಂದ, ಚಂದ್ರಶೇಖರ್(ಪುಟ್ಟ) ಹಾಗೂ ನಾಗರಾಜ್ ರಾಮನರಸ ಅವರು, ಅಂದು ಬೆಳಿಗ್ಗೆ ದೇವರಿಗೆ ಗಣಹೋಮ, ಪಂಚ ವಿಂಶತಿ ಕಲಶ, ಕಲಾತತ್ವ ಅಧಿವಾಸ ಹೋಮ ನಡೆಯಲಿದೆ.

ಮಧ್ಯಾಹ್ನ ಅನ್ನ ಸಂತರ್ಪಣೆ, ಆಶ್ಲೇಷ ಬಲಿ, ರಾತ್ರಿ ವಿಶೇಷ ಸಿಡಿಮದ್ದು ಪ್ರದರ್ಶನ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.

ದೇವಸ್ಥಾನದ ಸುತ್ತಮುತ್ತ ಬಣ್ಣ ಬಣ್ಣದ ವಿದ್ಯುತ್ ಅಲಂಕಾರ ಮತ್ತು ಹೂವಿನ ಅಲಂಕಾರ ಹಾಗೂ 70ಕ್ಕೂ ಹೆಚ್ಚು ಗ್ರಾಮೀಣ ಕಲಾ ತಂಡಗಳಿಂದ ಕಲಾ ಪ್ರದರ್ಶನ ಮತ್ತು ರಾಜಬೀದಿ ಉತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ.

ಅಂದು ಸಂಜೆ 6:30ಕ್ಕೆ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಮಂದಾರ್ತಿ ಇವರಿಂದ ಐದು ಮೇಳಗಳ ಕಾಲಮಿತಿ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ಭಕ್ತಾದಿಗಳಲ್ಲಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *