ಇನೋವಾ ಕಾರಿನಲ್ಲಿ ತಂಬಾಕು ಚೀಲದಲ್ಲಿ ದಾಖಲೆಯಿಲ್ಲದ 08 ಕೋಟಿ ಪತ್ತೆ
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ದಾಖಲೆಯಿಲ್ಲದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪೊಲೀಸರು ತಪಾಸಣೆ ವೇಳೆ ಮಲ್ಲಾಡಿ ಹಳ್ಳಿ ಬಳಿಯಲ್ಲಿ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಇನೋವಾ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ತಂಬಾಕು ಚೀಲಗಳಲ್ಲಿ ದಾಖಲೆ ಇಲ್ಲದ 8 ಕೋಟಿ ರೂಪಾಯಿ ಪತ್ತೆಯಾಗಿದೆ.
ಈ ಹಣದ ಮೂಲದ ಬಗ್ಗೆ ಚಿತ್ರದುರ್ಗದ ಪೊಲೀಸ್ ವರಿಷ್ಟಾಧಿಕಾರಿ ಸ್ಥಳೀಯ ಮಾದ್ಯಮಗಳ ಜೊತೆಗೆ ಮಾತನಾಡಿ ಹೊಳಲ್ಕೆರೆ ಬಳಿ ದಾಖಲೆ ಇಲ್ಲದ ಕಾರಣ ವಶಕ್ಕೆ ಪಡೆದುಕೊಂಡ 8 ಕೋಟಿ ರುಪಾಯಿ ನಗದು ಶಿವಮೊಗ್ಗದ ಮೂಲದವರಿಗೆ ಸೇರಿದ್ದು ಎಂದಿದ್ದಾರೆ
ತಂಬಾಕು ಚೀಲಗಳಲ್ಲಿ ಸಿಕ್ಕ ಹಣವು ಮಲೆನಾಡ್ ಟ್ರೇಡರ್ಸ್ ಅಡಕೆ ವ್ಯಾಪಾರಿ ಸುರೇಶ್ ಅವರಿಗೆ ಸೇರಿದ್ದೆಂದು ಎಸ್ಪಿ ಧರ್ಮೇಂದ್ರಕುಮಾರ್ ಮೀನಾ ಹೇಳಿದ್ದಾರೆ. ಹೊಳಲ್ಕೆರೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇನ್ನೋವಾವನ್ನು ಜಪ್ತಿ ಮಾಡಿ ಹಣ ವಶಪಡಿಸಿಕೊಳ್ಳಲಾಗಿತ್ತು.
ಈ ಸಂಬಂಧಹೊಳಲ್ಕೆರೆ ತಾಲೂಕಿನ ತೇಕಲವಟ್ಟಿಯ ಸಚಿನ್, ಚಾಲಕ ಹರೀಶ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಶಿವಮೊಗ್ಗದ ಮಲೆನಾಡ್ ಟ್ರೇಡರ್ಸ್ ನ ಸುರೇಶ್ ಗೆ ಸೇರಿದ ಹಣವೆಂದು ಮಾಹಿತಿ ನೀಡಿದ್ದಾರೆ.
ಅಡಕೆ ಖರೀದಿಗಾಗಿ ಹಣ ನೀಡಿದ್ದರು. ಅಡಕೆ ಖರೀದಿ ಆಗದ ಹಿನ್ನೆಲೆಯಲ್ಲಿ ಹಣ ವಾಪಸ್ ಕೊಡಲು ಹೊರಟಿದ್ದೆವು ಎಂದು ಸಚಿನ್ ವಿಚಾರಣೆ ವೇಳೆ ತಿಳಿಸಿದ್ದಾರೆ.
ಸದ್ಯ ದಾಖಲೆ ಇಲ್ಲದ ಹಣ ವಶಕ್ಕೆ ಪಡೆದು ಕೇಸ್ ದಾಖಲಿಸಿದ್ದೇವೆ. ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಎಂದು ಎಸ್ಪಿ ಸ್ಪಷ್ಟ ಪಡಿಸಿದ್ದಾರೆ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್