ಗಸ್ತು ಅರಣ್ಯ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವುದು ಹೇಗೆ, ವೇತನವೆಷ್ಟು..?? – ವಿವರ ಇಲ್ಲಿದೆ ನೋಡಿ | forest guard

ಕರ್ನಾಟಕ ಅರಣ್ಯ ಇಲಾಖೆಯ 13 ವೃತ್ತಗಳಲ್ಲಿ ಒಟ್ಟು 540 ಗಸ್ತು ಅರಣ್ಯ ಪಾಲಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ.
ಇವು ಗ್ರೂಪ್​ ಸಿ ಹುದ್ದೆಗಳಾಗಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಅಧಿಕೃತ ಮಂಡಳಿಗಳಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ವೇತನ: ಮಾಸಿಕ 23,500-47,650 ರೂಪಾಯಿ.

ಹುದ್ದೆಗಳು- ಎಲ್ಲಿ, ಎಷ್ಟು?:

ಶಿವಮೊಗ್ಗ 66

ಬೆಂಗಳೂರು 49

ಬೆಳಗಾವಿ 12

ಬಳ್ಳಾರಿ 29

ಚಾಮರಾಜನಗರ 83

ಚಿಕ್ಕಮಗಳೂರು 52

ಧಾರವಾಡ 5

ಹಾಸನ 18

ಕಲಬುರಗಿ 58

ಕೆನಾರ 33

ಕೊಡಗು 26

ಮಂಗಳೂರು 62

ಮೈಸೂರು 47

ಅರ್ಜಿ ಸಲ್ಲಿಕೆ, ಅರ್ಜಿ ಶುಲ್ಕ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಅರ್ಜಿ ಶುಲ್ಕವನ್ನು ಆನ್​ಲೈನ್​ ಮೂಲಕವೇ ಪಾವತಿಸಬೇಕು.

ಪ.ಜಾ, ಪ. ಪಂ ಮತ್ತು ಪ್ರವರ್ಗ 1 ಪುರುಷ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 120 ರೂ.

ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 70 ರೂ.

ಪ್ರವರ್ಗ 2ಎ, 2ಬಿ, 3ಎ, 3ಬಿ ಪುರುಷ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 220 ರೂ.

ಪ್ರವರ್ಗ 2ಎ, 2ಬಿ, 3ಎ, 3ಬಿ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 120 ರೂ.

ಆಯ್ಕೆ ಪ್ರಕ್ರಿಯೆ: ಮೆರಿಟ್​ ಪಟ್ಟಿ, ದಾಖಲಾತಿ ಪರೀಕ್ಷೆ, ದೈಹಿಕ ಗುಣಮಟ್ಟ, ದೈಹಿಕ ಸಾಮರ್ಥ್ಯ, ಶ್ರವಣ ಹಾಗು ದೃಷ್ಟಿ ಪರೀಕ್ಷೆಯ ಮೂಲಕ ಆಯ್ಕೆ.

ಡಿಸೆಂಬರ್​ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​ 30. ಶುಲ್ಕ ಪಾವತಿಗೆ ಕಡೆಯ ದಿನಾಂಕ ಜನವರಿ 5. ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು kfdrecruitment.in ಇಲ್ಲಿಗೆ ಭೇಟಿ ನೀಡಿ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

13 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

15 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

3 days ago