ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಗೆ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿ ಪ್ರಧಾನ | Kalagodu

ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಗೆ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿ ಪ್ರಧಾನ | Kalagodu

ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ರವರಿಗೆ ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ಕೊಡ ಮಾಡುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಡಾ. ಅಂಬೇಡ್ಕರ್ ಸಮುದಾಯ ಭವನದಲ್ಲಿ ಏರ್ಪಡಲಾಗಿದ್ದ ಅಬ್ದುಲ್ ನಜೀರ್ ಸಾಬ್ ಜನ್ಮದಿನದ ಅಂಗವಾಗಿ ಪಂಚಾಯತ್ ರಾಜ್ ಸಬಲೀಕರಣ ದಿನಾಚರಣೆ ಡಾ|| ಚಿಕ್ಕಕೋಮಾರಿ ಗೌಡ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ 2021-22ನೇ ಸಾಲಿನ ಡಾ.ಚಿಕ್ಕಕೋಮಾರಿಗೌಡ ದತ್ತಿ ಪ್ರಶಸ್ತಿ ವಿತರಣೆ ಮಾಡಲಾಯಿತು.


ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ವತಿಯಿಂದ ಕೊಡ ಮಾಡುವ ‘ಅತ್ಯುತ್ತಮ ಪಂಚಾಯತ್ ರಾಜ್ ಜನಪ್ರತಿನಿಧಿ’ ಪ್ರಶಸ್ತಿಗೆ ಭಾಜನರಾಗಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ರವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಗುಂಡ್ಲುಪೇಟೆ ಶಾಸಕ ಹೆಚ್.ಎಂ. ಗಣೇಶ್ ಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಪಂಚಾಯತ್ ರಾಜ್ ಪರಿಷತ್ತಿನ ಅಧ್ಯಕ್ಷ ಸಿ. ನಾರಾಯಣಸ್ವಾಮಿ, ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ, ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಪ್ರಮೋದ್ ಹೆಗಡೆ ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಿ.9ರಂದು ಬೆಂಗಳೂರಿನ ಗಾಂಧಿ ಭವನ ಆವರಣದಲ್ಲಿರುವ ಬಾಪು ಸಭಾಂಗಣದಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮ ಅನಿವಾರ್ಯ ಕಾರಣಗಳಿಂದ ಡಿ.25 ಕ್ಕೆ ಮುಂದೂಡಲಾಗಿತ್ತು.

ಚಿಕ್ಕಕೊಮಾರಿಗೌಡ ದತ್ತಿ ಪ್ರಶಸ್ತಿ ವಿಜೇತ ಕಲಗೋಡು ರತ್ನಾಕರ್ ಗೆ ಅಭಿನಂದನೆಗಳ ಮಹಾಪೂರ

ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುವವರಿಗೆ ನೀಡುವ ಪ್ರಶಸ್ತಿ ಡಾ ಚಿಕ್ಕಕೊಮಾರಿ ಗೌಡ ಪ್ರಶಸ್ತಿಗೆ ಆಯ್ಕೆಯಾಗಿರುವ ಕಲಗೋಡು ರತ್ನಾಕರ್ ರವರಿಗೆ ಸಾಗರ ಹೊಸನಗ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ , ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ,ಆರ್ ಎಂ ಮಂಜುನಾಥ್ ಗೌಡ ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ,ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ನಾಗರಾಜ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ,ಬಿ ಜಿ ಚಂದ್ರಮೌಳಿ ಗೌಡ, ಅಶ್ವಿನ್ ಕುಮಾರ್ , ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷ ಗಣಪತಿ ಗವಟೂರು ,ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ, ಸದಸ್ಯರಾದ ಮಧುಸೂಧನ್ , ಆಸೀಫ಼್ ,ಚಂದ್ರೇಶ್  ಮುಖಂಡರಾದ ಜಿ ಆರ್ ಗೋಪಾಲಕೃಷ್ಣ , ಮಳವಳ್ಳಿ ಮಂಜುನಾಥ್ ,ರಮೇಶ್ ಫ್ಯಾನ್ಸಿ , ಉಲ್ಲಾಸ್ , ವಾಹಿದ್   ಸೇರಿದಂತೆ ಅನೇಕ ಮುಖಂಡರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸೋಲಿಲ್ಲದ ಸರದಾರ ಕಲಗೋಡು

ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಯಳಗಲ್ಲು ಗ್ರಾಮದ ಕಲಗೋಡು ನಿವಾಸಿಯಾದ ರತ್ನಾಕರ್ ಜೂನ್ 30 1962 ರಂದು ಜನಿಸಿದರು.

ಕಲಗೋಡ್ ರತ್ನಾಕರ್ ಪ್ರಪ್ರಥಮವಾಗಿ 1987 ರಲ್ಲಿ ಕೋಡೂರು ಮಂಡಲ ಪಂಚಾಯತ್ ಸದಸ್ಯರಾಗಿ ಗೆದ್ದು ಉಪ ಪ್ರಧಾನರಾಗಿ ಆಯ್ಕೆಯಾದರು.ಅಂದಿನಿಂದ ಪ್ರಾರಂಭವಾದ ಕಲಗೋಡು ರತ್ನಾಕರ್ ರವರ ಚೈತ್ರಯಾತ್ರೆ ಹಿಂದಿರುಗಿ ನೋಡಲೇ ಇಲ್ಲಾ…..

1995 ರಲ್ಲಿ ಹೊಸನಗರ ತಾಪಂ ಸ್ಥಾನಕ್ಕೆ ಕೋಡೂರು ಕ್ಷೇತ್ರದಿಂದ ಸ್ಪರ್ಧಿಸಿ ಸದಸ್ಯರಾಗಿ ಆಯ್ಕೆಯಾದರು,2000 ನೇ ಸಾಲಿನಲ್ಲಿ ಶಿವಮೊಗ್ಗ ಜಿಪಂ ಗೆ ಹೊಸನಗರ ತಾಲೂಕಿನ ಕಸಬಾ ಹೋಬಳಿಯಿಂದ ಸ್ಪರ್ಧಿಸಿ ಗೆಲುವಿನ ನಗೆ ಬೀರಿದರು. ಅದೇ ಅವಧಿಯಲ್ಲಿ 2000-2002 ರವರೆಗೆ ಜಿಪಂ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದರು.

ಈ ಸಂಧರ್ಭದಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬಲಿಷ್ಠ ಅಭ್ಯರ್ಥಿಯಾಗಿದ್ದ ಇವರು ಕ್ಷೇತ್ರದಾದ್ಯಂತ ತಮ್ಮ ಛಾಪನ್ನು ಮೂಡಿಸಿದ್ದರು ಆದರೆ ದುರದೃಷ್ಟವಶಾತ್ ಕ್ಷೇತ್ರ ಮರು ವಿಂಗಡಣೆಯಲ್ಲಿ ಹೊಸನಗರ ತಾಲೂಕ್ ತಮ್ಮ ಅಸ್ತಿತ್ವವನ್ನು ಕಳೆದುಕೊಂಡಿತ್ತು.

ನಂತರ 2005 ರಲ್ಲಿ ಮತ್ತೆ ಜಿಪಂ ಗೆ ಕಸಬಾ ಹೋಬಳಿಯಿಂದ ಸ್ಪರ್ಧಿಸಿ ಗೆಲುವಿನ ನಗೆ ಬೀರಿದರು.ಈ ಅವಧಿಯಲ್ಲಿ 2008-10 ರವರೆಗೆ ಜಿಪಂ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದರು.ಇದೇ ಅವಧಿಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಸದಸ್ಯರಾಗಿಯು ಕಾರ್ಯ ನಿರ್ವಹಿಸಿದ್ದಾರೆ.

2010 ರಲ್ಲಿ ರಾಜಕೀಯ ಮೇಲಾಟದಲ್ಲಿ ಕಸಬಾ ಜಿಪಂ ಕ್ಷೇತ್ರದಲ್ಲಿ ಮೀಸಲಾತಿ ನಿಗದಿಯಾಗದ ಕಾರಣ ಪಕ್ಕದ ಕ್ಷೇತ್ರವಾದ ರಿಪ್ಪನ್‌ಪೇಟೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಪೈಪೋಟಿಯ ನಡುವೆ ಗೆಲುವು ಸಾಧಿಸಿದ್ದು ಇತಿಹಾಸ.ಇದೇ ಅವಧಿಯಲ್ಲಿ 2010 ರಿಂದ 2014 ರವರೆಗೆ ಜಿಪಂ ವಿರೋದ ಪಕ್ಷದ ನಾಯಕರಾಗಿದ್ದರು.

2014 ರ ಜುಲೈ ತಿಂಗಳಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿ ಕೇವಲ ಎರಡು ವರ್ಷಗಳಲ್ಲಿ ಜಿಲ್ಲಾದ್ಯಂತ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿ ತಮ್ಮದೇ ಆದ ಛಾಪನ್ನು ಮೆರೆದಿದ್ದಾರೆ.

2017 ರ ಜಿಪಂ ಚುನಾವಣೆಯಲ್ಲಿ ಮತ್ತೊಮ್ಮೆ ತಮ್ಮ ಸ್ವಕ್ಷೇತ್ರ ಕಸಬಾ ಹೋಬಳಿಯಲ್ಲಿ ಸ್ಪರ್ಧಿಸಿ ಭಾರಿ ಅಂತರದಿಂದ ಗೆದ್ದು ಆಯ್ಕೆಯಾಗುವ ಮೂಲಕ ಸೋಲಿಲ್ಲದ ಸರದಾರರಾಗಿದ್ದಾರೆ.

2023 ರ ಸಾಗರ ಹೊಸನಗರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷಕ್ಕೆ ಅರ್ಜಿ ಸಲ್ಲಿಸಿದ್ದು ಸ್ವಲ್ಪ ಪ್ರಯತ್ನ ಪಟ್ಟಿದ್ದರು ಟಿಕೆಟ್  ದೊರಕುತಿತ್ತು ಆದರೆ ಪಕ್ಷ ನಿಷ್ಠರಾದ ಕಲಗೋಡು ರತ್ನಾಕರ್ ಹೈಕಮಾಂಡ್ ನಿರ್ಧಾರಕ್ಕೆ ಬೆಂಬಲಿಸಿ ಚುನಾವಣೆಯಲ್ಲಿ ಶಕ್ತಿಮೀರಿ ಶ್ರಮಿಸಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಡ ರೋಗಿಗಳ ಪಾಲಿನ ಆಶಾಕಿರಣ

ಹೊಸನಗರ,ತೀರ್ಥಹಳ್ಳಿ ಹಾಗೂ ಸಾಗರ ಭಾಗದ ಬಡ ರೋಗಿಗಳು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ತೆರಳಿದರೆ ಕಲಗೋಡು ರತ್ನಾಕರ್ ರವರಿಗೆ ಮೊದಲ ಕರೆ ಹೋಗಿಬಿಡುತ್ತದೆ.ಕೆಲವೇ ಕ್ಷಣಗಳಲ್ಲಿ ಆಸ್ಪತ್ರೆಗೆ ಹಾಜರಾಗುವ ಕಲಗೋಡು ರತ್ನಾಕರ್ ರೋಗಿಗೆ ಚಿಕಿತ್ಸೆ ಕೊಡಿಸಿ ಅವರು ಗುಣಮುಖರಾಗುವವರೆಗೂ ಮಾಡುವ ಫಾಲೋಅಪ್ ತುಂಬಾ ವಿಶೇಷವಾದುದು,ಯಾವುದೇ ಪಕ್ಷವಾಗಿರಲಿ , ಧರ್ಮವಾಗಿರಲಿ ,ಜಾತಿಯಾಗಿರಲಿ ಆರೋಗ್ಯ ಸಮಸ್ಯೆಯೆಂದರೆ ಅಲ್ಲಿಗೆ ಬಂದು ನಿಲ್ಲುವ ಕಲಗೋಡು ರತ್ನಾಕರ್ ಎಷ್ಟೋ ಬಡ ಜನರ ಪಾಲಿನ ದೇವರಾಗಿದ್ದಾರೆ ಎಂದರೆ ತಪ್ಪಾಗುವುದಿಲ್ಲ.

ಒಟ್ಟಾರೆಯಾಗಿ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ತಮ್ಮದೇ ಛಾಪು ಮೂಡಿಸಿರುವ ನಾಯಕ ಕಲಗೋಡು ರತ್ನಾಕರ್ ರವರಿಗೆ ಡಾ.ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿ ದೊರಕಿರುವುದು ಸಂತಸದ ವಿಷಯವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

2 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

3 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

7 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

11 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

13 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago