ಶಿವಮೊಗ್ಗ : ಅಲ್ ಹಿದಾಯ ಇಹ್ವಾನ್ ಸೆಂಟರ್ ಆಶ್ರಯದಲ್ಲಿ ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್ ಡಿ.15 ರಂದು ಮರ್ಹೂಂ ಹೈದರ್ ಅಲಿ ನಿಝಾಮಿ ವೇದಿಕೆ, ಯುನಿಟಿ ಹಾಲ್ ಮುಂಭಾಗ, ಆರ್ ಎಂಎಲ್ ನಗರದಲ್ಲಿ ನಡೆಯಲಿದೆ.
ಶುಕ್ರವಾರ ಮಗ್ರಿಬ್ ನಮಾಜ್ ನಂತರ ಸಯ್ಯಿದ್ ಶಿವಮೊಗ್ಗ ತಂಗಳ್ , ಸಯ್ಯದ್ ತೀರ್ಥಹಳ್ಳಿ ತಂಗಳ್, ಶೈಖುನಾ ಕಾರ್ಗಲ್ ಉಸ್ತಾದ್ , ಸಯ್ಯದ್ ಯೂಸುಫ್ ತಂಗಲ್ , ಸಯ್ಯದ್ ಶಫೀಖ್ ತಂಗಲ್ ರವರ ನೇತೃತ್ವದಲ್ಲಿ ಹುಬ್ಬೂರಸೂಲ್ ಕಾನ್ಪರೆನ್ಸ್ ನಡೆಯಲಿದೆ
ಹಾಫಿಲ್ ಸ್ವಾದಿಖ್ ಅಲಿ ಫಾಳಿಲಿ ನೇತೃತ್ವದಲ್ಲಿ ಬುರ್ದಾ ಕಾರ್ಯಕ್ರಮ ನಡೆಯಲಿದ್ದು, ನಬೀಲ್ ಬರಕಾತಿ ಬೆಂಗಳೂರು ರವರ ನೇತೃತ್ವದಲ್ಲಿ ನಅತೇ ಶರೀಫ್ ನಡೆಯಲಿದೆ.
ಈ ಹುಬ್ಬೂರಸೂಲ್ ಕಾನ್ಪರೆನ್ಸ್ ಗೆ ಸಮಾಜದ ಬಾಂಧವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅಲ್ ಹಿದಾಯ ಇಹ್ವಾನ್ ಸೆಂಟರ್ ನ ಪ್ರಮುಖರು ಮನವಿ ಮಾಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್