ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ
ರಿಪ್ಪನ್ಪೇಟೆ : ಗರ್ತಿಕೆರೆ ಸಮೀಪದ ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ಡಿ.18ರ ಸೋಮವಾರ 17ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ಆಯೋಜಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ದೇವಸ್ಥಾನದ ವ್ಯವಸ್ಥಾಪಕರಾದ ಸುನಂದ, ಚಂದ್ರಶೇಖರ್(ಪುಟ್ಟ) ಹಾಗೂ ನಾಗರಾಜ್ ರಾಮನರಸ ಅವರು, ಅಂದು ಬೆಳಿಗ್ಗೆ ದೇವರಿಗೆ ಗಣಹೋಮ, ಪಂಚ ವಿಂಶತಿ ಕಲಶ, ಕಲಾತತ್ವ ಅಧಿವಾಸ ಹೋಮ ನಡೆಯಲಿದೆ.
ಮಧ್ಯಾಹ್ನ ಅನ್ನ ಸಂತರ್ಪಣೆ, ಆಶ್ಲೇಷ ಬಲಿ, ರಾತ್ರಿ ವಿಶೇಷ ಸಿಡಿಮದ್ದು ಪ್ರದರ್ಶನ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.
ದೇವಸ್ಥಾನದ ಸುತ್ತಮುತ್ತ ಬಣ್ಣ ಬಣ್ಣದ ವಿದ್ಯುತ್ ಅಲಂಕಾರ ಮತ್ತು ಹೂವಿನ ಅಲಂಕಾರ ಹಾಗೂ 70ಕ್ಕೂ ಹೆಚ್ಚು ಗ್ರಾಮೀಣ ಕಲಾ ತಂಡಗಳಿಂದ ಕಲಾ ಪ್ರದರ್ಶನ ಮತ್ತು ರಾಜಬೀದಿ ಉತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ.
ಅಂದು ಸಂಜೆ 6:30ಕ್ಕೆ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಮಂದಾರ್ತಿ ಇವರಿಂದ ಐದು ಮೇಳಗಳ ಕಾಲಮಿತಿ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ಭಕ್ತಾದಿಗಳಲ್ಲಿ ಮನವಿ ಮಾಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್