ತಂಬಾಕು ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ | Tobacco Raid
ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ|| ಸುರೇಶ್‌ರವರ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾಯ್ದೆಯನ್ವಯ ಹೊಸನಗರ ಪಟ್ಟಣದ ಸುಮಾರು 25 ಅಂಗಡಿಗಳ ಮೇಲೆ ದಾಳಿ ನಡೆಸಿ ಸುಮಾರು 3 ಸಾವಿರ ರೂ. ನಷ್ಟು ಹಣವನ್ನು ಸರ್ಕಾರದ ಬೊಕ್ಕಸಕ್ಕೆ ತುಂಬಿಸಿದ್ದಾರೆ.
ದಾಳಿ ನಡೆಸುವ ಸಂದರ್ಭದಲ್ಲಿ ಮಾತನಾಡಿದ ಬಿ.ಹೆಚ್.ಇ.ಓ ಕರಿಬಸಮ್ಮ, ತಂಬಾಕು ನಮ್ಮ ದೇಹವನ್ನು ಸಂಪೂರ್ಣ ಸುಟ್ಟು ಹಾಕುತ್ತದೆ. ಈ ಬಗ್ಗೆ ಸರ್ಕಾರಗಳು ಜನಪ್ರತಿನಿಧಿಗಳು ಎಷ್ಟೇ ಹೇಳಿದರೂ ತಂಬಾಕು ಸೇವಿಸುವವರು ಕಡಿಮೆ ಮಾಡುತ್ತಿಲ್ಲ. ಇದರಿಂದ ನಿಮ್ಮ ದೇಹ ಸುಡುವುದರ ಜೊತೆಗೆ ಎಷ್ಟೋ ಸಂಸಾರಗಳು ಬೀದಿಗೆ ಬಂದಿದೆ. ಯಜಮಾನನಿಲ್ಲದ ಮನೆ ದೇವರಿಲ್ಲದ ಗುಡಿಯಂತೆ. ಮನೆಯ ಯಜಮಾನನ್ನು ಕಳೆದುಕೊಂಡಂತಾಗುತ್ತದೆ. ತಂಬಾಕು ಸೇವೆಯಿಂದ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಾರೆ. ಈ ತಂಬಾಕು ಮನುಷ್ಯರ ದೇಹಕ್ಕೆ ಹಲವಾರು ಕಾಯಿಲೆಗೆ ನಾವೇ ಆಹ್ವಾನ ನೀಡಿದಂತಾಗುತ್ತದೆ. ಮನೆಯ ಯಜಮಾನ ತಂಬಾಕು ಸೇವನೆಯಿಂದ ಮುಕ್ತಿ ಹೊಂದಿದರೇ ಇಡೀ ಕುಟುಂಬವೇ ಸುಖ ಸಂತೋಷದಿಂದ ಇರಬಹುದು.
ಆದ್ದರಿಂದ, ತಂಬಾಕಿನಿಂದ ಮುಕ್ತಿ ಹೊಂದಿ ಜೊತೆಗೆ ಮಾರಾಟಗಾರರು ತಂಬಾಕು ಮಾರಾಟ ಮಾಡದಿದ್ದರೆ ಹೊಸನಗರ ತಾಲ್ಲೂಕು ತಂಬಾಕು ಮುಕ್ತ ತಾಲ್ಲೂಕಾಗಿ ಮಾಡಬಹುದು. ಆದ್ದರಿಂದ ಎಲ್ಲ ಅಂಗಡಿ ಮಾಲೀಕರು ನಮ್ಮೊಂದಿಗೆ ಕೈಜೋಡಿಸಿ ತಂಬಾಕು ಮುಕ್ತ ಹೊಸನಗರ ಮಾಡಲು ಸಹಕರಿಸಿ ಎಂದರು.
ಈ ದಾಳಿಯ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಾರ್ಯಕರ್ತ ರವಿರಾಜ್ ಜಿ.ಕೆ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಮೇಶ್ ಆಚಾರ್, ಕ್ಷಯರೋಗ ನಿಯಂತ್ರಣ ಮೇಲ್ವಿಚಾರಕ ಚಂದ್ರಪ್ಪ, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸ್, ಪೊಲೀಸ್ ಇಲಾಖೆಯ ವಸಂತ್ ಹಾಗೂ ಪಿಹೆಚ್‌ಸಿಓ ಗೀತಾ, ಬಿ.ಪಿ.ಎಂ ನಿಕೀತ್‌ರಾಜ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್