ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ – ಪಿಎಸ್‌ಐ ಪ್ರವೀಣ್ ಎಸ್ ಪಿ | Neharu cricketers

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ – ಪಿಎಸ್‌ಐ ಪ್ರವೀಣ್ ಎಸ್ ಪಿ
ರಿಪ್ಪನ್‌ಪೇಟೆ : ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು.

ಪಟ್ಟಣದ ಹೊಸನಗರ ರಸ್ತೆಯ ಆರ್ ಸಿಸಿ ಕ್ರೀಡಾಂಗಣದಲ್ಲಿ ನೆಹರು ಕ್ರಿಕೆಟರ್ಸ್ ಆಯೋಜಿಸಿದ್ದ ಹೊನಲು ಬೆಳಕಿನ 30 ಗಜದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯೂ ಜೀವನದ ಒಂದು ಭಾಗವಾಗಿದ್ದು ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುತ್ತದೆ. ನೀತಿ ನಿಯಮಗಳ ಸಂವಹನೆಯೊಂದಿಗೆ ಶಿಸ್ತಿನ ಅರಿವು ಉಂಟಾಗುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಹೆಚ್ಚಿಸುತ್ತದೆ. ಹಾಗೆಯೇ ಇದರಿಂದ ಮನಸ್ಸಿನ ನಾಗಾಲೋಟದ ಕೌಶಲತೆ ವೃದ್ಧಿಸುತ್ತದೆ. ಅದನ್ನು ಜೀವನದ ಒಂದು ಭಾಗವೆಂದು ಪರಿಗಣಿಸುವುದರಿಂದ ಒತ್ತಡದ ಜೀವನದಿಂದ ಹೊರಬರಲು ಸಾಧ್ಯ ಎಂದರು.

ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಮಾತನಾಡಿ
ಕ್ರೀಡೆಗಳು ಹುಟ್ಟಿಕೊಂಡಿದ್ದೆ ಗ್ರಾಮೀಣ ಭಾಗದಿಂದ. ಟಿವಿ, ಕಂಪ್ಯೂಟರ್, ಮೊಬೈಲ್‌ಗಳ ಹಾವಳಿಗೆ ಚಿನ್ನಿದಾಂಡು, ಲಗೋರಿ, ಗೋಲಿ ಆಟ, ಕಬಡ್ಡಿ, ಖೋಖೋ, ಕಾಲ್ಚೆಂಡು ಸೇರಿದಂತೆ ಅನೇಕ ರೀತಿಯ ಗ್ರಾಮೀಣ ಸೊಗಡಿನ ಆಟಗಳು ಮರೆಯಾಗಿವೆ. ಅಂದಿನ ಆಟಗಳಲ್ಲಿ ಸಂತೋಷ, ಉಲ್ಲಾಸ, ವ್ಯಾಯಾಮ, ಸ್ನೇಹತ್ವಗಳು ದೊರೆಯುತ್ತಿದ್ದವು. ಈಗ ಅವೆಲ್ಲ ಮರೆಯಾಗಿವೆ.ಯುವಕರು ಗ್ರಾಮೀಣ ಕ್ರೀಡೆಗಳಿಗೆ ಒತ್ತು ನೀಡಬೇಕು. ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಸುಸಂಸ್ಕೃತಿ, ಆಚಾರ, ವಿಚಾರಗಳನ್ನು ಬೆಳೆಸಿಕೊಳ್ಳಬೇಕು ಎಂದರು.


ಇದೇ ಸಂಧರ್ಭದಲ್ಲಿ ಪಿಎಸ್‌ಐ ಪ್ರವೀಣ್ ಹಾಗೂ ಅದ್ಬುತ ಸಾಧನೆಗೈದ ಕ್ರೀಡಾಪಟುಗಳು ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸಲಾಯಿತು.

ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ,ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ನೆಹರು ಕ್ರಿಕೆಟರ್ಸ್ ಅಧ್ಯಕ್ಷರಾದ ನಾಗರಾಜ್ ಶೆಟ್ಟಿ , ಗ್ರಾಪಂ ಸದಸ್ಯರುಗಳಾದ ಸುಂದರೇಶ್ , ಗಣಪತಿ , ನಿರುಪ್ , ಆಸೀಪ್ , ಸಾರಾಭಿ ,ವೇದಾವತಿ  ನೆಹರು ಕ್ರಿಕೆಟರ್ಸ್ ನ ಗೌರವಾಧ್ಯಕ್ಷ ಪರಮೇಶ್ , ಮೋಹನ್ ,ಗಿರೀಶ್ , ಚಿನ್ನು ಹಾಗೂ ಇನ್ನಿತರರಿದ್ದರು.

ಪಂದ್ಯಾವಳಿಯಲ್ಲಿ‌ ಕೋಡೂರು ತಂಡ ಪ್ರಥಮ ಸ್ಥಾನ ಗಳಿಸಿದರೆ ಜೇನಿ ತಂಡ ದ್ವಿತೀಯ ,ಮಾವಿನಕೊಪ್ಪ ತಂಡ ತೃತೀಯ ಹಾಗೂ ನೆಹರು ಕ್ರಿಕೆಟರ್ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

1 hour ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

2 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

16 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

16 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

23 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago