ನಗ್ನ ವೀಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬೆದರಿಕೆ – ಕಾರು ಚಾಲಕನ ಮೇಲೆ ದಾಖಲಾಯ್ತು ಕೇಸ್ | BDVT
ಮಹಿಳೆಯೊಂದಿಗೆ ಸಲುಗೆ ಬೆಳೆಸಿ ವಿಡಿಯೋ ಕಾಲ್ನಲ್ಲಿ ಮಾತನಾಡುವಾಗ ಆಕೆಯ ನಗ್ನ ಚಿತ್ರಗಳನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾರು ಚಾಲಕನ ವಿರುದ್ಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಭದ್ರಾವತಿಯ ನಿವಾಸಿಯೊಬ್ಬರು ದೂರು ನೀಡಿದ್ದು ಶಿವಮೊಗ್ಗದ ವ್ಯಕ್ತಿ ವಿರುದ್ಧ ಕೇಸ್ ದಾಖಲಾಗಿದೆ. ಕಳೆದ ವರ್ಷ ಮಹಿಳೆಯ ಕುಟುಂಬದವರು ದೇವಸ್ಥಾನಕ್ಕೆ ಹೋಗುವ ಸಲುವಾಗಿ ಕಾರೊಂದನ್ನ ಬಾಡಿಗೆ ಪಡೆದಿದ್ದರಂತೆ. ಆನಂತರ ಕಾರಿನ ಚಾಲಕ ಪರಿಚಯವಾಗಿ ಮಹಿಳೆಯ ಜೊತೆ ವಿಡಿಯೋ ಕಾಲ್ ಚಾಟ್ ನಡೆದಿದೆ.
ಈ ಮಧ್ಯೆ ಮಹಿಳೆಯ ವಿಡಿಯೋ ಕಾಲ್ನ ನಗ್ನ ವಿಡಿಯೋ ಇಟ್ಟುಕೊಂಡು ಕಾರು ಚಾಲಕ 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದಲ್ಲದೆ ವಿಡಿಯೋವನ್ನ ಆಕೆಯ ಪತಿಗೆ ಕಳುಹಿಸಿದ್ದನಂತೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ನಿವಾಸಿ ಶಿವಮೊಗ್ಗ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೇ ನಡೆಸ್ತಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್