ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ
ಶಿವಮೊಗ್ಗ : ಇಲ್ಲಿನ ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ಕುವೆಂಪು ರಸ್ತೆಯ ಆದಿಚುಂಚನಗಿರಿ ಪಿಯು ಕಾಲೇಜಿನ ಕಟ್ಟಡದಿಂದ ವಿದ್ಯಾರ್ಥಿನಿ ಮೇಘನಾ ಕೆಳಗೆ ಬಿದ್ದು ಮೃತ ಪಟ್ಟ ಘಟನೆಯ ಬೆನ್ನಲ್ಲೆ ಮತ್ತೊಬ್ಬ ವಿದ್ಯಾರ್ಥಿಯು ಮಹಡಿ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದ ರಚನಾ(21) ಎಂಬ ಪದವಿ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ,ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.