ಬಸ್ ನಲ್ಲಿ ಪಕ್ಕದ ಸೀಟಿನಲ್ಲಿದ್ದ ಸುಂದರಿ ಜೊತೆ ರೋಮ್ಯಾನ್ಸ್ – ಲಾಡ್ಜ್ ಗೆ ಕರೆದೊಯ್ದ ಸುಂದರಿ ಚಾಲಕನಿಗೆ ಮಾಡಿದ್ದೇನು ಗೊತ್ತಾ…???|Shivamogga

ಬಸ್ ನಲ್ಲಿ ಪಕ್ಕದ ಸೀಟಿನಲ್ಲಿದ್ದ ಸುಂದರಿ ಜೊತೆ ರೋಮ್ಯಾನ್ಸ್ – ಲಾಡ್ಜ್ ಗೆ ಕರೆದೊಯ್ದ ಸುಂದರಿ ಚಾಲಕನಿಗೆ ಮಾಡಿದ್ದೇನು ಗೊತ್ತಾ…???


ಬಸ್​ನಲ್ಲಿ ದೂರ ಪ್ರಯಾಣಿಸುವಾಗ ತಮ್ಮ ಪಕ್ಕದ ಸೀಟಿನಲ್ಲಿ ಮಹಿಳೆಯರು ಬಂದು ಕುಳಿತರೆ ಕೆಲವರಿಗೆ ಅದೊಂದು ಸಂತಸದ ವಿಷಯವಾಗಿರುತ್ತದೆ. ಹಾಗೆಯೇ ಕಾರವಾರ ದಿಂದ ಹೊರಟು ಶಿವಮೊಗ್ಗಕ್ಕೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ಪಕ್ಕದಲ್ಲಿ ಮಹಿಳೆ ಕುಳಿತಿದ್ದು ಅಗಾಧ ಸಂತಸ ತಂದು ಅವಳೊಂದಿಗೆ ಪರಿಚಯ ಮಾಡಿಕೊಂಡು ಸಲುಗೆ ಬೆಳೆಸಿಕೊಂಡ ಇದ್ದನ್ನೆ ಕಾಯುತಿದ್ದ ಖತರ್ ನಾಕ್ ಅಪರಿಚಿತ ಮಹಿಳೆ ವ್ಯಕ್ತಿಗೆ ಬರೋಬ್ಬರಿ 50 ಸಾವಿರ ನಗದು ಹಾಗೂ ಚಿನ್ನಾಭರಣ ಮೋಸ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.

ನಡೆದಿದ್ದೇನು..???

ಕೆಎಸ್ ಆರ್ ಟಿ ಸಿ ಬಸ್ ನಲ್ಲಿ ಹೊನ್ನಾವರದಿಂದ ಬಂದ ಲಾರಿ ಚಾಲಕನೊಬ್ಬ ಅಪರಿಚಿತ ಮಹಿಳೆಯ ಪಕ್ಕ ಕುಳಿತು ಪ್ರಯಾಣಿಸಿ ಅವಳೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಾನೆ.

ಲಾಡ್ಜ್ ಗೆ ಕರೆದ ಮಹಿಳೆ ..!!

ಗಂಡನನ್ನು ಕಳೆದುಕೊಂಡು 8 ತಿಂಗಳಾಗಿದೆ ಇವತ್ತು ನಿನ್ನೊಂದಿಗೆ ಕಾಲ ಕಳೆಯಬೇಕು ಎಂದು ಹೇಳಿ ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಇಳಿದು ಮಹಿಳೆಯೇ ಲಾಡ್ಜ್ ಗೆ ಕರೆದುಕೊಂಡು ಹೋಗಿ ರೂಂ ನ್ನು ಬಾಡಿಗೆಗೆ ಪಡೆದಿದ್ದಾಳೆ.

ರೂಂ ನಲ್ಲಿ ಮೈಮೇಲಿನ ಚಿನ್ನಾಭರಣ, ಸಿಲಿಂಡರ್ ಲಾರಿಯ 50 ಸಾವಿರ ನಗದು ಹಣವನ್ನ ಬ್ಯಾಗ್ ಒಂದರಲ್ಲಿ ಹಾಕುವಂತೆ ಸೂಚಿಸಿ‌ದ ಮಹಿಳೆ ಈ ರೀತಿಯೇ ಮಲಗಬೇಕೆಂದು ಸ್ವಾಮೀಜಿ ತಿಳಿಸಿದ್ದಾರೆ ಎಂದು ಹೇಳಿದ್ದಾಳೆ. ಮಹಿಳೆಯ ಸೂಚನೆಯಂತೆ ಚಾಲಕ ಪಾಲಿಸಿದ್ದಾನೆ.

ಊಟ ತರುವಷ್ಟರಲ್ಲಿ ಸುಂದರಿ‌ ಮಾಯ!!

ಸ್ವಲ್ಪ ಸಮಯದ ನಂತರ ಊಟ ತೆಗೆದುಕೊಂಡು ಬಾ ಎಂದು ಮಹಿಳೆಯೇ ಚಾಲಕನಿಗೆ 200 ರೂ ಹಣ ಕೊಟ್ಟು ಕಳುಹಿಸಿದ್ದಾಳೆ. ಊಟ ತರಲು ಹೋದ ಚಾಲಕ ಊಟ ಪಾರ್ಸಲ್ ತಂದ ವೇಳೆ ಮಹಿಳೆ ಕೊಠಡಿ ಖಾಲಿ ಮಾಡಿಕೊಂಡು ಜಾಗ ಖಾಲಿ ಮಾಡಿದ್ದಾಳೆ. ಮಹಿಳೆಯ ಮೇಲಿನ ಆಸೆಗೆ ಚಾಲಕ 1,24,000/- ರೂ ನಗದು ಹಾಗೂ ಚಿನ್ನಾಭರಣ ಕಳೆದುಕೊಂಡಿದ್ದಾನೆ.

ಮಹಿಳೆಯ ಮೊಬೈಲ್ ಗೆ ಕರೆ ಮಾಡಿದಾಗಲೆಲ್ಲಾ ಎರಡು ಬಾರಿ ರಿಂಗ್ ಆಗಿ ಕಟ್ ಆಗುತ್ತಿತ್ತು. ಈ ಘಟನೆ  ಡಿಸೆಂಬರ್ 15 ರಂದು ನಡೆದಿದೆ.

ದೂರು ನೀಡಿದ ಚಾಲಕ :

ಬಸ್ಸಿನಲ್ಲಿ ಸಿಕ್ಕಿದ ಬೆಳದಿಂಗಳ ಆಂಟಿಯನ್ನು ಬಯಸಿದ ಚಾಲಕ ಹಣ ಕಳೆದುಕೊಂಡ ಮೇಲೆ ಸಾಕಷ್ಟು ಹುಡುಕಾಡಿ ವಿಫಲವಾದ ನಂತರ ದೂರು ದಾಖಲಿಸಿದ್ದಾನೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

2 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

3 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

7 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

11 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

13 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago