ಮನೆಯಂಗಳದಲ್ಲಿದ್ದ ಶ್ರೀಗಂದದ ಮರಗಳನ್ನು ರಾತ್ರೋರಾತ್ರಿ ಕದ್ದೊಯ್ದ ಕಳ್ಳರು
ಸಾಗರ : ನಗರದ ಶ್ರೀರಾಂಪುರ ಬಡಾವಣೆಯ ಪ್ರಗತಿಪರ ಕೃಷಿಕ ಗೌತಮ್ ಪೈರವರ ಮನೆ ಅಂಗಳದಲ್ಲಿದ್ದ ಎರಡು ಗಂಧದ ಮರದ ಕಾಂಡವನ್ನು ಕತ್ತರಿಸಿಕೊಂಡು ಕಳ್ಳರು ಹೊತ್ತೊಯ್ದಿರುವ ಪ್ರಕರಣ ನಡೆದಿದೆ.
ಗೌತಮ್ ಪೈ ಪ್ರಗತಿಪರ ಕೃಷಿಕರಾಗಿದ್ದು, ಮನೆಯ ಅಂಗಳದಲ್ಲಿ ಪಶ್ಚಿಮಘಟ್ಟದ ವಿವಿಧ ಜಾತಿಯ ಹೂ, ಹಣ್ಣಿನ ಗಿಡಗಳನ್ನು ಬೆಳೆದು ಮಾದರಿಯಾಗಿದ್ದಾರೆ.
ಎರಡು ಗಂಧದ ಮರಗಳು 18 ಹಾಗೂ 22 ವರ್ಷದ ಅವಧಿಯಲ್ಲಿ ಬೆಳೆದಿದ್ದು, ಕಾಂಡಗಳು ಸದೃಢವಾಗಿ ಬೆಳೆದಿದ್ದವು.
ಅವರೇ ತಿಳಿಸಿದಂತೆ ಸುಮಾರು ಬೆಳಗಿನ ಜಾವ ಎರಡೂವರೆ ಹೊತ್ತಿಗೆ ಎರಡೂ ಮರಗಳ ರೆಂಬೆ ಮತ್ತು ಬುಡದ ಕೆಳಭಾಗವನ್ನು ಕತ್ತರಿಸಿ ಕಾಂಡವನ್ನು ಮಾತ್ರ ಕಳವು ಮಾಡಲಾಗಿದೆ. ಗಂಧದ ತುಂಡುಗಳು ಸುಮಾರು 3 ಲಕ್ಷಕ್ಕೂ ಅಧಿಕ ಬೆಲೆಬಾಳುತ್ತವೆ ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿ ಅಶೋಕ್ ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್