ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ – ಜಿಲ್ಲೆಯ ಏಳು ತಾಲೂಕಿನ ಅಧಿಕಾರಿಗಳು ಯಾರು ಗೊತ್ತಾ..??| State government

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ


ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರತಿ ತಾಲ್ಲೂಕಿಗೂ ಒಬ್ಬರು ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿಗೆ ರವಿಚಂದ್ರ ನಾಯಕ್ ಕೆಎಎಸ್ , ಸಾಗರ ತಾಲೂಕಿಗೆ ಡಾ. ಬಸಂತಿ KAS ,ಶಿಕಾರಿಪುರ ತಾಲೂಕಿಗೆ ನಾಗೇಂದ್ರ ಎಫ಼್ ಹೊನ್ನಾಳಿ KAS , ಭದ್ರಾವತಿ ತಾಲೂಕಿಗೆ ಸಂಗಪ್ಪ KAS , ಸೊರಬ ತಾಲೂಕಿಗೆ ಅಭಿಷೇಕ್ ವಿ KAS , ತೀರ್ಥಹಳ್ಳಿ ತಾಲೂಕಿಗೆ ಸಿದ್ದಲಿಂಗಪ್ಪ KAS ಹಾಗೂ ಶಿವಮೊಗ್ಗ ತಾಲೂಕಿಗೆ ಸಿದ್ದಲಿಂಗ ರೆಡ್ಡಿ KAS ರವರನ್ನು ಉಸ್ತುವಾರಿ ಅಧಿಕಾರಿಗಳಾನ್ನಾಗಿ ನಿಯೋಜನೆ ಮಾಡಲಾಗಿದೆ.


ಗ್ಯಾರಂಟಿ ಯೋಜನೆಗಳ ಪರಿಶೀಲನೆ, ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡುವುದು, ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಶ್ರಮಿಸುವುದು. ಕುಂದು–ಕೊರತೆಗಳನ್ನು ಸರ್ಕಾರದ ಗಮನಕ್ಕೆ ತರುವುದು, ಅಂಗನವಾಡಿಗಳಿಗೆ ಮೂಲಸೌಕರ್ಯ ಕಲ್ಪಿಸುವುದು, ಮಕ್ಕಳಿಗೆ ನೀಡುವ ಪೌಷ್ಟಿಕಾಂಶ ವಿತರಣೆಯ ನಿರ್ವಹಣೆ ಮಾಡುವುದು, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಜಲಮೂಲಗಳ ಜೀರ್ಣೋದ್ಧಾರ, ಬಿತ್ತನೆಬೀಜ, ಗೊಬ್ಬರ ವಿತರಣೆ, ಉದ್ಯೋಗ ಖಾತ್ರಿ ಕಾಮಗಾರಿ, ಪಿಂಚಣಿ ಸೌಲಭ್ಯಗಳ ಪ್ರಗತಿ ಪರಿಶೀಲನೆ ನಡೆಸುವುದು, ದೌರ್ಜನ್ಯ ಪ್ರಕರಣಗಳನ್ನು ತಡೆಯುವುದೂ ಸೇರಿದಂತೆ 13 ವಿಚಾರಗಳ ನಿರ್ವಹಣೆಯ ಹೊಣೆಗಾರಿಕೆಯನ್ನು ವಹಿಸಲಾಗಿದೆ.

ನಿಯೋಜನೆಗೊಂಡ ತಾಲ್ಲೂಕಿಗೆ ತಿಂಗಳಿಗೆ ಕನಿಷ್ಠ ಎರಡು ಬಾರಿ ಭೇಟಿ ನೀಡಬೇಕು. ಪರಿಶೀಲನಾ ವರದಿಯನ್ನು ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳಿಗೆ ನೀಡಬೇಕು ಎಂದು ಸೂಚಿಸಲಾಗಿದೆ.

ಉಸ್ತುವಾರಿ ಅಧಿಕಾರಿಗಳ ಜವಬ್ದಾರಿಗಳೇನು ..???

ಸರ್ಕಾರವು ನೂತನವಾಗಿ ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆಗಳ (ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಶಕ್ತಿ ಯೋಜನೆ, ಯುವನಿಧಿ) ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸುವುದು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ವಸತಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿ, ನ್ಯೂನತೆಗಳನ್ನು ಸರಿಪಡಿಸಲು ಕ್ರಮವಹಿಸುವುದು.

ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಶಾಲೆ, ಕಾಲೇಜು ಹಾಗೂ ಐಟಿಐಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಅಧ್ಯಯನ ಮಾಡಿ, ಸೂಕ್ತ ಪರಿಹಾರ ಕಂಡುಕೊಳ್ಳುವುದು ಹಾಗೂ ಶಾಲಾ ಕಟ್ಟಡ ದುರಸ್ತಿ, ಹೊಸ ಕಟ್ಟಡಗಳ ನಿರ್ಮಾಣ ಇತ್ಯಾದಿ ಕಾಮಗಾರಿಗಳ ಪರಿಶೀಲನೆ ನಡೆಸುವುದು.

ಸ್ವಂತ ಕಟ್ಟಡ ಇಲ್ಲದಿರುವ ಅಂಗನವಾಡಿಗಳಿಗೆ ನಿವೇಶನವನ್ನು ಒದಗಿಸುವ ಬಗ್ಗೆ ಪರಿಶೀಲನೆ ಹಾಗೂ ನಿರ್ಮಾಣ ಹಂತದಲ್ಲಿರುವ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ಪರಿಶೀಲಿಸುವುದು ಹಾಗೂ ತಾಲೂಕಿನಲ್ಲಿರುವ ಅಪೌಷ್ಟಿಕ ಮಕ್ಕಳ ವಿವರ ಪಡೆದು, ನಿರಂತರವಾಗಿ ಸರ್ಕಾರದ ಅಪೌಷ್ಟಿಕತೆ ನಿವಾರಣೆ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲು ಕ್ರಮವಹಿಸುವುದು.

ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಇಂಧನ, ಜಲಸಂಪನ್ಮೂಲ, ಲೋಕೋಪಯೋಗಿ, ಕೃಷಿ, ತೋಟಗಾರಿಕೆ ಇಲಾಖೆಗಳಲ್ಲಿನ ಪ್ರಮುಖ ಕಾರ್ಯಕ್ರಮಗಳಾದ ಕುಡಿಯುವ ನೀರು, ರಸ್ತೆಗಳು, ವಿದ್ಯುಚ್ಛಕ್ತಿ, ಮೇವು ಲಭ್ಯತೆ, ಬೀಜ ಮತ್ತು ರಸಗೊಬ್ಬರ, ಮಧ್ಯಾಹ್ನದ ಬಿಸಿಯೂಟ, ನರೇಗಾ, ಸಾಮಾಜಿಕ ಭದ್ರತೆಯಡಿ ನೀಡುತ್ತಿರುವ ಪಿಂಚಣಿ ಕಾರ್ಯಕ್ರಮಗಳ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸುವುದು.

ತಾಲೂಕಿನ ಯುವಕರಿಗೆ ಉದ್ಯೋಗಾಧಾರಿತ ತರಬೇತಿ ಕುರಿತು ಸಮನ್ವಯ ಹಾಗೂ ಸಾಲ ಮಂಜೂರಾತಿಗೆ ಬೇಕಾದ ಅವಶ್ಯ ಸಲಹೆ ನೀಡಲು ಕ್ರಮವಹಿಸುವುದು ಹಾಗೂ ತಾಲೂಕಿನ ಯುವಕ-ಯುವತಿಯರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಅವರ ವೃತ್ತಿನೈಪುಣ್ಯತೆ (skill) ಹೆಚ್ಚಿಸಿ ಅವರ ಜೀವನೋಪಾಯವನ್ನು ಸಧೃಡಗೊಳಿಸಲು ಕ್ರಮವಹಿಸುವುದು.

ತಾಲ್ಲೂಕಿನಲ್ಲಿ ಗೃಹ ಮತ್ತು ಸಣ್ಣ ಕೈಗಾರಿಕೆಗಳನ್ನು ಗುರುತಿಸಿ, ಅವರಿಗೆ ಸರ್ಕಾರದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಉದ್ಯೋಗಾವಕಾಶ ಕಲ್ಪಿಸುವ ಬಗ್ಗೆ ಕ್ರಮವಹಿಸುವುದು.

ಖಾಸಗಿ ಸಾಮಾಜಿಕ ಜವಾಬ್ದಾರಿ (Corporate Social Responsibility) ಯೋಜನೆಯಡಿಯಲ್ಲಿ ವಿವಿಧ ಕಂಪನಿಗಳಿಂದ ಶಾಸನಬದ್ಧವಾದ ಆರ್ಥಿಕ ಸಹಾಯ ಪಡೆದು ತಾಲ್ಲೂಕಿನ, ಶೈಕ್ಷಣಿಕ, ಆರೋಗ್ಯ ಸ್ವಚ್ಛತೆ ಹಾಗೂ ನೈಸರ್ಗಿಕ ಕಾರ್ಯಗಳನ್ನು ನಿರ್ವಹಿಸಲು ಕ್ರಮವಹಿಸುವುದು. (ಉದಾಹರಣೆಗೆ: ತಾಲೂಕಿನ ಜಲಮೂಲಗಳ ಜೀರ್ಣೋದ್ಧಾರ ಮಾಡುವ ಬಗ್ಗೆ ಕ್ರಮವಹಿಸುವುದು.)

ಪ್ರತಿ ಗ್ರಾಮ ಪಂಚಾಯತಿವಾರು ಕುಡಿಯುವ ನೀರಿನ ವ್ಯವಸ್ಥೆ, ಓವರ್‌ಹೆಡ್ ಟ್ಯಾಂಕ್‌ಗಳ ಸ್ವಚ್ಛತೆ ಮತ್ತು impounding reservoirs ಗಳನ್ನು ಪರಿಶೀಲಿಸಿ ವರದಿ ಸಲ್ಲಿಸುವುದು ಹಾಗೂ ಅತಿವೃಷ್ಟಿ ಮತ್ತು ಅನಾವೃಷ್ಠಿಗಳಂತಹ ಸಂದರ್ಭದಲ್ಲಿ ತಾಲೂಕಿನ ವಿವಿಧ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಪ್ರಕೃತಿ ವಿಕೋಪಕ್ಕೀಡಾದ ಪ್ರದೇಶಗಳಲ್ಲಿ ತುರ್ತು ಕ್ರಮವಹಿಸುವುದು.

ತಾಲೂಕಿನಲ್ಲಿ ದೌರ್ಜನ್ಯ ಪ್ರಕರಣಗಳನ್ನು ಪರಿಶೀಲಿಸಿ ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸುವುದು.

ಪ್ರತಿ ತಾಲೂಕಿಗೆ ಸಂಬಂಧಪಟ್ಟಂತೆ, ನಿಯೋಜಿಸಲ್ಪಟ್ಟ ಕೆ.ಎ.ಎಸ್. ಅಧಿಕಾರಿಯು ಪ್ರತಿ ಮಾಹೆ ಕನಿಷ್ಠ ಎರಡು ಬಾರಿ ಭೇಟಿ ನೀಡುವುದು. ಸದರಿ ಭೇಟಿ ಸಮಯದಲ್ಲಿ ಇಲಾಖೆಗಳ ಕಾರ್ಯ ಪರಿಶೀಲನೆ, ಇಲಾಖೆಗಳು ಕೈಗೊಂಡಿರುವ ವಿವಿಧ ಯೋಜನೆಗಳಡಿ ಅಭಿವೃದ್ಧಿ ಯೋಜನೆಗಳು ಸ್ಥಳಪರಿಶೀಲನೆ ಮಾಡುವುದರೊಂದಿಗೆ ನಗರ ಸ್ಥಳೀಯ ಸಂಸ್ಥೆ ಗ್ರಾಮೀಣ ಸ್ಥಳೀಯ ಸಂಸ್ಥೆಗಳು(ಪಂಚಾಯತ್) ತಯಾರಿಸುವ ಕ್ರಿಯಾಯೋಜನೆಗಳ ಪರಿಶೀಲನೆ ಮಾಡುವುದು ಹಾಗೂ ಸದರಿ ಕಾರ್ಯ ಯೋಜನೆಗಳನ್ನು ನಾಗರೀಕ ಸ್ನೇಹಮಯ ಮಾಡಲು ಸೂಕ್ತ ಸಲಹೆಗಳನ್ನು ನೀಡುವುದು, ಸರ್ಕಾರದ ಹಿತದೃಷ್ಟಿಗೆ ಧಕ್ಕೆಯಾಗದಂತಹ ರೀತಿಯಲ್ಲಿ ತಮ್ಮ ಮಟ್ಟದಲ್ಲಿ ಹೊಸ ಉಪಕ್ರಮಗಳನ್ನು ತೆಗೆದುಕೊಳ್ಳುವುದು.

ತಾಲೂಕು ಉಸ್ತುವಾರಿ ಅಧಿಕಾರಿಗಳು ಮೇಲ್ಕಂಡ ಕಾರ್ಯಗಳನ್ನು ಅತ್ಯಂತ ಬದ್ಧತೆಯಿಂದ ನಿರ್ವಹಿಸಲು ಸೂಚಿಸಿದೆ ಹಾಗೂ ಪ್ರತಿಮಾಹೆ ತಾವು ನಿರ್ವಹಿಸಿದ ಕಾರ್ಯವರದಿಯನ್ನು ಸರ್ಕಾರಕ್ಕೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಿಗೆ ಹಾಗೂ ಜಿಲ್ಲಾಧಿಕಾರಿಯವರಿಗೆ ಸಲ್ಲಿಸುವುದು.

ತಾಲೂಕು ಉಸ್ತುವಾರಿ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುವುದು ಮತ್ತು ಸಂಬಂಧಪಟ್ಟ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಹಿಸುವ ಹೆಚ್ಚುವರಿ ಕಾರ್ಯಗಳನ್ನು ನಿರ್ವಹಿಸುವುದು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

2 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

3 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

7 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

11 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

13 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago