ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball
ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ.
2023. 24 ನೇ ಸಾಲಿನ ಪದವಿಪೂರ್ವ ಕಾಲೇಜುಗಳ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟ ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿದೆ.
ರಿಪ್ಪನ್ ಪೇಟೆಯ ಶ್ರೀರಾಮನಗರ ನಿವಾಸಿಗಳಾದ ಶೇಖಬ್ಬ ಹಾಗೂ ಸೈಫುನ್ನಿಸಾ ದಂಪತಿಗಳ ಪುತ್ರನಾದ ಸೂಫಿಯಾನ್ ಪ್ರಸ್ತುತ ಎಸ್ ಡಿ ಎಂ ಉಜಿರೆ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾನೆ.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ ಮಾಡುತಿದ್ದ
ಸುಫಿಯಾನ್ ರಿಪ್ಪನ್ ಪೇಟೆಯ ಸಿದ್ದಿ ವಿನಾಯಕ ವಾಲಿಬಾಲ್ ಕ್ಲಬ್ ತಂಡದ ಆಟಗಾರರಾಗಿದ್ದಾರೆ.
ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಸೂಫಿಯಾನ್ ಎಸ್ ಡಿ ಎಮ್ ಸಂಸ್ಥೆಯ ಕ್ರೀಡಾ ಕಾರ್ಯದರ್ಶಿಗಳಾದ ರಮೇಶ್ ಹಾಗೂ ಫಿಸಿಕಲ್ ಎಜುಕೇಶನ್ ಡೈರೆಕ್ಟರ್ ಸಂದೇಶ್ ಎಸ್ ಡಿ ಎಮ್ ತಂಡದ ವಾಲಿಬಾಲ್ ತರಬೇತಿದಾರರಾದ ಸುದೀನ್ ಪೂಜಾರಿ ಅವರ ಗರಡಿಯಲ್ಲಿ ಪಳಗಿರುತ್ತಾನೆ.
ಕರ್ನಾಟಕ ರಾಜ್ಯ ಪ್ರತಿನಿದಿಸುವ ಅವಕಾಶ ಪಡೆದಿರುವುದರಿಂದ ರಿಪ್ಪನ್ ಪೇಟೆ ಯ ಸಿದ್ದಿ ವಿನಾಯಕ ವಾಲಿಬಾಲ್ ಕ್ಲಬ್ ಹಾಗೂ ಇನ್ನಿತರ ಸಂಘ ಸಂಸ್ಥೆಗಳು ಯುವ ಪ್ರತಿಭೆಗೆ ಶುಭ ಕೋರಿವೆ.
ರಾಷ್ಟ್ರ ಮಟ್ಟದಲ್ಲಿ ಯುವ ಪ್ರತಿಭೆ ಉತ್ತಮ ರೀತಿಯಲ್ಲಿ ಪ್ರದರ್ಶನ ತೋರಿ ನಮ್ಮೂರಿಗೆ, ನಮ್ಮ ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಾಗಲಿ ಎಂಬುವುದೇ ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಸಂಸ್ಥೆಯ ಆಶಯ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್