ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!
ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹರತಾಳು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.
ಹರತಾಳು ಗ್ರಾಮದ ರಾಘವೇಂದ್ರ ಎಂಬುವವರ ಮನೆಯ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ರಾಘವೇಂದ್ರ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.
ದಾಳಿಯಲ್ಲಿ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಉಮೇಶ್ ,ಶಿವಕುಮಾರ್ ,ಸಂತೋಷ್ ಕೊರವರ ಮತ್ತು ಮಧುಸೂಧನ್ ಇದ್ದರು.