ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು | Train Accident
ಭದ್ರಾವತಿ– ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿರುತ್ತಾರೆ.
ಈತನ ಚಹರೆ ಸುಮಾರು 5.5 ಅಡಿ ಎತ್ತರ, ಸಾಧಾಕಪ್ಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಬಿಟ್ಟಿದ್ದು, ಅರ್ಧ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಗಡ್ಡ, ಮೀಸೆ ಇರುತ್ತದೆ. ಒಂದು ಕೆಂಪು ಬಣ್ಣದ ಕಪ್ಪು ಚುಕ್ಕೆಯುಳ್ಳ ಸ್ವೇಟರ್, ಒಂದು ಬಿಳಿ ಬಣ್ಣದ ಕಪ್ಪು ಗೆರೆಯುಳ್ಳ ಉದ್ದ ತೋಳಿನ ಶರ್ಟ್, ಸಿಮೆಂಟ್ ಕಲರ್ ಪ್ಯಾಂಟ್, ಒಂದು ಬಣ್ಣದ ಉಡುದಾರ, ಕಪ್ಪು ಬಣ್ಣದ ಚಪ್ಪಲಿಗಳು ಮತ್ತು ಕೆಂಪು, ಬಿಳಿ ಬಣ್ಣದ ಟವೆಲ್ ಧರಿಸಿರುತ್ತಾರೆ.
ಮೃತನ ದೇಹವು ಮೆಗ್ಗಾನ್ ಆಸ್ಪತ್ರೆಯ ಶೈತ್ಯಾಗಾರದಲ್ಲಿರುತ್ತದೆ.
ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ದೂ.ಸಂ.08182-222974, 9480802124 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್