ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment
Shikaripura | ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಶಿಕ್ಷಕರನ್ನ ಅಮಾನತು ಮಾಡಿ ಡಿಡಿಪಿಐ ಆದೇಶಿಸಿದ್ದಾರೆ.
ಶಿಕಾರಿಪುರ ತಾಲೂಕಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಾಯಕ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಅವರನ್ನು ಅಮಾನತುಗೊಳಿಸಲಾಗಿದೆ.
ಶಿಕ್ಷಕ ಶಾಂತಕುಮಾರ್ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದ್ದು, ಪ್ರಕರಣದ ಬಗ್ಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸದೇ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆಪಾದನೆಯಿಂದಾಗಿ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ಲೈಂಗಿಕ ಕಿರುಕುಳ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ನಡುವೆ ಬಂದ ಆರೋಪಗಳ ಅಧಾರದ ಮೇಲೆ ಬಿಇಒ ಪ್ರಕರಣದ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಡಿಡಿಪಿಐ ಅವರಿಗೆ ವರದಿ ನೀಡಿದ್ದಾರೆ. ಇದರ ಆಧಾರದ ಮೇಲೆ ಕ್ರಮಕೈಗೊಳ್ಳಲಾಗಿದೆ.
ಗುಡ್ ಟಚ್ ಬ್ಯಾಡ್ ಟಚ್ ಬಗ್ಗೆ ಶಾಲಾ ಶಿಕ್ಷಕಿಯರ ಬಳಿ ಮಕ್ಕಳು ತಮ್ಮ ಅಳಲು ತೋಡಿಕೊಂಡಿದ್ದರು. ನಂತರ ಶಿಕ್ಷಕಿಯರ ಮೂಲಕ ವಿಚಾರ ಮುಖ್ಯ ಶಿಕ್ಷಕರ ಗಮನಕ್ಕೆ ಹೋಗಿತ್ತು. ಆದರೆ ಈ ಸಂಬಂಧ ದೂರು ದಾಖಲಾಗಿರಲಿಲ್ಲ ಎಂದು ಹೇಳಲಾಗಿದೆ.