ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News
ಭದ್ರಾವತಿ : ಇಲ್ಲಿನ ಭದ್ರಾ ವೈನ್ಸ್ ಶಾಪ್ (Wineshop)ನಲ್ಲಿ ವ್ಯಕ್ತಿಯೊಬ್ಬನ ಕೊಲೆ(murder) ಯಾಗಿದೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೇಮಂತ್ ಅಲಿಯಾಸ್ 35 ವರ್ಷ ಕರಿ ಚಿಕ್ಕಿಯನ್ನ ಕೊಲೆ ಮಾಡಲಾಗಿದೆ.
ಭದ್ರಾವತಿ ಪಟ್ಟಣ್ಣದ ಭದ್ರಾ ವೈನ್ಸ್ ಸ್ಟೋರ್ನಲ್ಲಿಯೇ ಈ ಘಟನೆ ನಡೆದಿದ್ದು, ಈ ಹಿಂದೆ ನಡೆದಿದ್ದ ಮುಜ್ಜು ಎಂಬಾತ ಕೊಲೆಗೆ ಪತ್ರೀಕಾರವಾಗಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ನಾಲ್ಕೈದು ಯುವಕರು ಹೇಮಂತ್ ಅಲಿಯಾಸ್ ಕರಿಚಿಕ್ಕಿ ಎಂಬಾತನನ್ನ ಬಿಹೆಚ್ ರಸ್ತೆಯಲ್ಲಿರುವ ಭದ್ರಾ ವೈನ್ಸ್ ನಲ್ಲಿ ಹೊಡೆದು ಹಾಕಿದ್ದಾರೆ.
ಸದ್ಯ ಘಟನೆ ಸಂಬಂಧ ಭದ್ರಾವತಿ ಹಳೇನಗರ ಪೊಲೀಸ್ ಸ್ಟೇಷನ್ನಲ್ಲಿ ಪ್ರಕರಣ ದಾಖಲಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್