POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ | Suspended

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್


ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ಪ್ರವಾಸದ ವೇಳೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಲೇ ಅವರನ್ನು ಅಮಾನತು ಮಾಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 42 ವರ್ಷದ ಮುಖ್ಯಶಿಕ್ಷಕಿ ವಿದ್ಯಾರ್ಥಿ ಜೊತೆ ಕೆನ್ನೆಗೆ ಮುತ್ತು ಕೊಡುವಂತೆ,‌ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್‌ ಆಗಿ ಫೋಟೊ ಶೂಟ್‌ ಮಾಡಿಸಿದ್ದರು. ವಿದ್ಯಾರ್ಥಿ ಕೂಡ ಶಿಕ್ಷಕಿಯನ್ನು ಮುದ್ದಾಡಿದ್ದು, ಮುಖ್ಯೋಪಾಧ್ಯಾಯಿನಿ ಕೂಡ ವಿದ್ಯಾರ್ಥಿಯನ್ನು ತಬ್ಬಿಕೊಂಡು ಪ್ರಣಯವಾಗಿ ವರ್ತಿಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ. 

ಈ ಎಲ್ಲ ಫೋಟೊಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಶೂಟ್‌ನ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಚಿಂತಾಮಣಿ ಜಿಲ್ಲಾ ಶಿಕ್ಷಣಾಧಿಕಾರಿ ಉಮಾದೇವಿ ಶಾಲೆಗೆ ಭೇಟಿ ನೀಡಿ ಪ್ರವಾಸಕ್ಕೆ ತೆರಳಿದ್ದ ಸಹ ಶಿಕ್ಷಕರು,ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿಗಳನ್ನು ವಿಚಾರಣೆ ನಡೆಸಿದ್ದಾರೆ.

 ಡಿಸೆಂಬರ್ 22 ರಿಂದ 25 ರವರೆಗೆ ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಹೊರನಾಡು, ಧರ್ಮಸ್ಥಳ, ಯಾಣ ಮತ್ತು ಇತರ ಸ್ಥಳಗಳಿಗೆ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದು, ಅಂದು ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ ಎಂದು ಉಮಾದೇವಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.