ಶಿವಮೊಗ್ಗ ಜಿಲ್ಲೆಯಲ್ಲಿ 10ಕ್ಕೇರಿದ ಕೊರೊನಾ ಪಾಸಿಟಿವ್ ಸಂಖ್ಯೆ
ಶಿವಮೊಗ್ಗ ಜಿಲ್ಲೆಯಲ್ಲಿ 10ಕ್ಕೇರಿದ ಕೊರೊನಾ ಪಾಸಿಟಿವ್ ಸಂಖ್ಯೆ
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರಲ್ಲಿ ಓರ್ವರು ಶಿವಮೊಗ್ಗ ಮತ್ತೋರ್ವರು ಸೊರಬ ತಾಲೂಕಿಗೆ ಸೇರಿದವರು ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಇವತ್ತು 236 ಜನರಿಗೆ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. 236 ಜನರಲ್ಲಿ ಇಬ್ಬರಿಗೆ ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.
ನಿನ್ನೆ 8 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಇಂದು ಇಬ್ಬರಿಗೆ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 10 ಕ್ಕೆ ಏರಿದೆ. ಸೋಂಕು ಪತ್ತೆಯಾದ 8 ಜನರಿಗೆ ಹೋಂ ಐಸೋಲೇಷನ್ ಗೆ ಒಳಪಡಲು ಸೂಚಿಸಲಾಗಿದೆ. ಉಳಿದಿಬ್ಬರಿಗೆ ನಿಗದಿತ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.


