ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ : ಶಾಸಕ ಬೇಳೂರು ಗೋಪಾಲ ಕೃಷ್ಣ | GKB

ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ  : ಶಾಸಕ ಬೇಳೂರು ಗೋಪಾಲಕೃಷ್ಣ



ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದ್ದು,ಬಾಲ್ಯದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವು ಅವರ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹಿರಿದಾಗಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಪಟ್ಟಣದ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ನೇರಲ ಮನೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಶನಿವಾರ ಸಂಜೆ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಯಾವುದೇ  ಪ್ರತಿಷ್ಟಿತ ಖಾಸಗಿ ಶಾಲೆಗಳಿಗಿಂತಲೂ  ಅತ್ಯುತ್ತಮ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತಿದ್ದು ಅದರ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳುವುದರ ಮೂಲಕ ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಉದ್ಯೋಗವನ್ನು ಅಲಂಕರಿಸಿ ಸಮಾಜದ ಮುಖ್ಯ ವಾಹಿನಿಗೆ ಬರಲು ಪೋಷಕರು  ಹಾಗೂ ಶಿಕ್ಷಕರ ಪ್ರೇರಣೆ ಹಾಗೂ ಸಹಕಾರ ಅಗತ್ಯವಾಗಿದೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳು ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿ ಕಾರ್ಯ ನಿರ್ವಹಿಸುತಿದ್ದಾರೆ.ಅವರಲ್ಲಿರುವ ಕೌಶಲ್ಯ ,ಪ್ರತಿಭೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಹಾಗೇಯೆ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಶಿಕ್ಷಣ ನೀಡುತಿದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳಲು ಪೋಷಕರಲ್ಲಿ ಹಿಂಜರಿಕೆ ಬೇಡ ಹಾಗೇಯೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭಾನ್ವಿತರಾಗಿದ್ದು ಅವರುಗಳಿಗೆ ಉತ್ತಮ ಅವಕಾಶ ಕಲ್ಪಿಸಿ ಕೊಟ್ಟರೆ ಅವರು ದೇಶದ ಉತ್ತಮ ಪ್ರಜೆಯಾಗಿ ರೂಪುಗೊಳ್ಳುತ್ತಾರೆ ಎಂದರು.

ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ನೆರೆದಿದ್ದ ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಎಸ್ ಡಿಎಂ ಸಿ  ವತಿಯಿಂದ ಶಾಸಕರಾದ  ಬೇಳೂರು ಗೋಪಾಲ ಕೃಷ್ಣ ರವರನ್ನು ಗೌರವಿಸಿ ಸನ್ಮಾನಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಬಾಲಚಂದ್ರ ಎನ್.ವಹಿಸಿದ್ದರು.

ಕಾರ್ಯಕ್ರಮದಲ್ಲಿ , ಬಾಳೂರು  ಗ್ರಾಪಂ ಅಧ್ಯಕ್ಷ  ಶ್ರೀನಿವಾಸ್ ಆಚಾರ್, ವೇದಾವತಿ ಬಾಲಚಂದ್ರ ಉಪಾಧ್ಯಕ್ಷೆ  ಸದಸ್ಯರಾದ ರಾಜು, ರೇಖಾ ಬಸವ ರಾಜ್ ,ಶಿಕ್ಷಣ ಇಲಾಖೆಯ  ಮಂಜುನಾಥ್, ಕರಿಬಸಪ್ಪ ಶಾಲೆಯ ಮುಖ್ಯೋಪಾಧ್ಯಾಯ ಟಿ. ದಾನೇಶಪ್ಪ ಶಿಕ್ಷಕಿ ವನಜಾಕ್ಷಿ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

2 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

3 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

7 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

11 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

13 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago