POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಹೆದ್ದಾರಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಯುವಕರು – ಇಬ್ಬರ ಬಂಧನ | Firing

ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಇಬ್ಬರು ಯುವಕರ ಅರೆಸ್ಟ್


ಶಿವಮೊಗ್ಗ ಜಿಲ್ಲೆಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿದಂತ ಇಬ್ಬರು ಯುವಕರು ಗಾಳಿಯಲ್ಲಿ ಏರ್ ಗನ್ ನಿಂದ ಗುಂಡು ಹಾರಿಸಿ ಪುಂಡಾಟ ಮೆರೆದಿರೋದಾಗಿ ತಿಳಿದು ಬಂದಿದೆ. ಈ ಘಟನೆ ಸಂಬಂಧ ಪುಂಡಾಟ ಮೆರೆದಂತ ಇಬ್ಬರನ್ನು ಬಂಧಿಸಿ, ಏರ್ ಗನ್, ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ.

ಶಿವಮೊಗ್ಗ ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪದ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಹೆದ್ದಾರಿಯಲ್ಲೇ ಕಾರನ್ನು ನಿಲ್ಲಿಸಿ, ಕುಣಿದಾಡಿದ್ದಾರೆ. ಅಲ್ಲದೇ ಕಾರಿನಿಂದ ಏರ್ ಗನ್ ತೆಗೆದಂತ ಒಬ್ಬಾತ, ಅದರಿಂದ ಗಾಳಿಯಲ್ಲಿ ಗುಂಡು ಹಾರಿಸಿ ಹುಚ್ಚಾಟ ಮೆರೆದಿದ್ದಾನೆ. ಹೀಗೆ ಹುಚ್ಚಾಟ ಮೆರೆದ ವೀಡಿಯೋವನ್ನು ಸ್ಥಳದಲ್ಲಿದ್ದಂತ ಜನರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು.

ವೀಡಿಯೋ ವೈರಲ್ ಆಗುತ್ತಿದ್ದಂತೆ, ಈ ಸಂಬಂಧ ತುಂಗಾ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಸಿರಗನಹಳ್ಳಿಯ ಹರ್ಷ ಪಟೇಲ್(23) ಹಾಗೂ ಅಜ್ಜಂಪುರದ ಅಭಿಷೇಕ್ (23) ಎಂಬುದಾಗಿ ಗುರುತಿಸಲಾಗಿದೆ. ಈ ಆರೋಪಿಗಳ ವಿರುದ್ಧ ಅಜಾಗರೂಕತೆ ಹಾಗೂ ಬೇಜವಾಬ್ದಾರಿ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಮ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.