Accident | ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಟ್ಟೆಗೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ
ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪ ಕಾರೊಂದು ಅಫಘಾತಕ್ಕೀಡಾಗಿದೆ. ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿ ಮೂವರಿಗೆ ಗಾಯವಾದ ಘಟನೆ ನಡೆದಿದೆ.
ಪಿಳ್ಳಂಗೇರಿ ಗ್ರಾಮದ ಹೆದ್ದಾರಿ ಸಮೀಪದಲ್ಲಿಯೇ ಇರುವ ಗಣಪತಿ ದೇವಸ್ಥಾನದ ಕಟ್ಟೆಗೆ ಕಾರು ಡಿಕ್ಕಿಯಾಗಿದೆ.
ಕಾರಿನಲ್ಲಿದ್ದವರು ಚನ್ನಗಿರಿಯ ಅರಿಶಿನಘಟ್ಟಕ್ಕೆ ಹೋಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಈ ಘಟನೆ ಸಂಭವಿಸಿದೆ. ಪಿಳ್ಳಂಗೇರಿ ಗ್ರಾಮದ ಸಮೀಪ ಚಾಲಕ ನಿಯಂತ್ರಣ ತಪ್ಪಿ, ಕಾರು ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆಡಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೂ ಘಟನೆ ವೇಳೆ ಗಣಪತಿ ದೇವಸ್ಥಾನದ ಕಟ್ಟೆ ಮೇಲೆ ಯಾರು ಕೂತಿರಲಿಲ್ಲ. ಹೀಗಾಗಿ ಹೆಚ್ಚಿನ ಅಪಾಯವಾಗಲಿಲ್ಲ ಎನ್ನುತ್ತಾರೆ ಸ್ತಳೀಯರು.