ಬೈಕ್ ಗೆ ನಾಯಿ ಅಡ್ಡ ಬಂದು ಅಪಘಾತ – ಸವಾರ ಸ್ಥಳದಲ್ಲೇ ಸಾವು
ತೀರ್ಥಹಳ್ಳಿ: ಬೈಕ್ ಚಲಿಸುವ ವೇಳೆ ನಾಯಿ ಅಡ್ಡ ಬಂದು ಅಪಘಾತವಾಗಿ ಸವಾರ ಸ್ಥಳದಲ್ಲೇ ಸಾವು ಕಂಡು ಪತ್ನಿ ಗಂಭೀರ ಗಾಯಗೊಂಡಿರುವ ಘಟನೆ ಕಲ್ಮನೆ ಸಮೀಪದ ಹೆಗ್ಗೋಡಿ ನಲ್ಲಿ ನಡೆದಿದೆ.
ಕಮ್ಮರಡಿ ಸಮೀಪದ ಅರೇಹಳ್ಳಿ ಗ್ರಾಮ ಪಂಚಾಯಿತಿಯ ಜೋಡುಕಟ್ಟೆ ಬೈಲು ಊರಿನ ಹಮೀದ್ (55) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಹಮೀದ್ ಮತ್ತು ರೆಹಮತ್ ದಂಪತಿಗಳು ಇಂದು TVS ಜುಪಿಟರ್ ಸ್ಕೂಟರ್ ನಲ್ಲಿ ಹೋಗುವಾಗ ನಾಯಿ ಬೈಕ್ ಗೆ ಅಡ್ಡ ಸಿಕ್ಕಿ ಅಪಘಾತವಾಗಿ ಬೈಕ್ ಸವಾರ ಹಮೀದ್ ಎನ್ನುವವರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಮೃತ ವ್ಯಕ್ತಿಯ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಹಮೀದ್ ಮಂಗಳೂರಿನಲ್ಲಿ ಕೆಲಸದಲ್ಲಿದ್ದು ರಜೆ ನಿಮಿತ್ತ ಊರಿಗೆ ಬಂದಿದ್ದರು ಎನ್ನಲಾಗುತ್ತಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್