Accident | ಭದ್ರಾವತಿಯ ಶಾಸಕ ಬಿ‌ ಕೆ ಸಂಗಮೇಶ್ ರವರ ಆಪ್ತ ಸಹಾಯಕ ರಸ್ತೆ ಅಪಘಾತದಲ್ಲಿ ‌ಸಾವು

Accident | ಭದ್ರಾವತಿಯ ಶಾಸಕ ಬಿ‌ ಕೆ ಸಂಗಮೇಶ್ ರವರ ಆಪ್ತ ಸಹಾಯಕ ರಸ್ತೆ ಅಪಘಾತದಲ್ಲಿ ‌ಸಾವು


ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಕಾಂಗ್ರೆಸ್(congress) ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಆಪ್ತ ಸಹಾಯಕರಾದ ಈಶ್ವರ್ ರಸ್ತೆ ಅಪಘಾತದಲ್ಲಿ (accident) ಸಾವನ್ನಪ್ಪಿರುವ ಘಟನೆ ತಡರಾತ್ರಿ ನಡೆದಿದೆ.

ಶಾಸಕರ ಆಪ್ತ ಸಹಾಯಕ ಈಶ್ವರ್ ಕೂಡ್ಲಿಗೆರೆಯಿಂದ ಭದ್ರಾವತಿಗೆ(bhadravathi) ಬೈಕ್ ನಲ್ಲಿ ಬರುತ್ತಿರುವಾಗ ಲಾರಿ ಡಿಕ್ಕಿಯಾಗಿದೆ. ತಕ್ಷಣವೇ ಸ್ಥಳೀಯರು ಗಾಯಾಳು ಈಶ್ವರ್ ರವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.ಮೃತ ದೇಹವನ್ನು ಭದ್ರಾವತಿಯ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಮರಣೋತ್ತರ ಪರೀಕ್ಷಾ ಕೇಂದ್ರದಲ್ಲಿರಿಸಲಾಗಿದೆ.

ಈಶ್ವರ್ ಸಾವು ಭದ್ರಾವತಿ ಶಾಸಕರ ಕುಟುಂಬಕ್ಕೂ ಆಘಾತ ನೀಡಿದೆ. ಆಪ್ತ ಸಹಾಯಕ ಈಶ್ವರ್ ಅಪಘಾತದಲ್ಲಿ ದುರ್ಮರಣವಾದ ವಿಷಯವನ್ನು ಶಾಸಕ ಬಿ ಕೆ ಸಂಗಮೇಶ್ ತಮ್ಮ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ.

ಆಪ್ತ ಸಹಾಯಕನಾದ ಈಶ್ವರ್ ನ ದುರ್ಮರಣದ ಬಗ್ಗೆ ಶಾಸಕರು ಸಂತಾಪ ಮತ್ತು ದುಃಖವನ್ನ‌ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ಪೇಜ್ ನಲ್ಲಿ ನನಗೆ ಶಕ್ತಿಯಾಗಿ, ನನ್ನ‌ ಬೆನ್ನಲುಬಾಗಿ ನಿಂತಿದ್ದ ಈಶ್ವರ್  ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರ ಆತ್ಮಕ್ಕೆ ಶಾಂತಿಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಪೋಸ್ಟ್ ಮಾಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

4 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

17 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

19 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

19 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

19 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

1 day ago