Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಅಪ್ರಾಪ್ತನ ಜೊತೆಗೆ ಯುವತಿಯೊಬ್ಬಳು ಅಸಭ್ಯವಾಗಿ ಕುಣಿದ ಪ್ರಕರಣಕ್ಕೆ ಸಂಬಂದಪಟ್ಟಂತೆ ಪೋಕ್ಸೋ ಕೇಸ್ ದಾಖಲಾಗಿದೆ
ಅಶ್ಲೀಲ ನೃತ್ಯದ ವೀಡಿಯೋ ಎಲ್ಲೆಡೆ ವೈರಲ್ ಆದ ಹಿನ್ನಲೆಯಲ್ಲಿ
ಸದ್ಯ ಘಟನೆ ಸಂಬಂಧ ಪೊಲೀಸ್ ಇಲಾಖೆಯು ಸಹ ಎಚ್ಚೆತ್ತುಕೊಂಡಿದ್ದು, ವೈರಲ್ ವಿಡಿಯೋವನ್ನು ಆಧರಿಸಿ ಪೋಕ್ಸೋ ಕಾಯಿದೆಯಡಿ ಆನಂದಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
26/11/23 ರಂದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯವಾಗಿ ನೃತ್ಯ ಮಾಡಿದ ಆರೋಪ ಸಂಬಂಧ ಯುವತಿ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಬಾಲ ಸಂರಕ್ಷಣ ನ್ಯಾಯ ಸೆಕ್ಷನ್ 75,POSCO ಸೆಕ್ಷನ್ 14,IPC ಸೆಕ್ಷನ್ 293 ರ ಅಡಿಯಲ್ಲಿ ಆನಂದಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್