Hosanagara | ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: ಶ್ರೀಗಂಧದ ತುಂಡುಗಳ ಸಹಿತ ನಾಲ್ವರ ಬಂಧನ

ನಗರ ವಲಯ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ:
ಶ್ರೀಗಂಧದ ತುಂಡುಗಳ ಸಹಿತ ನಾಲ್ವರು ಆರೋಪಿಗಳ ಬಂಧನ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ವಲಯ ವ್ಯಾಪ್ತಿಯ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 97ರ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಕಡಿತಲೆ ಮಾಡಿ ಸಾಗಾಣಿಕೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ  ಬಂಧಿಸಿ,ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.

ಆರೋಪಿಗಳಾದ ನಿವಣೆ ವಾಸಿ ಪರಮೇಶ್ವರಪ್ಪ, ಮಾಣಿ ಗ್ರಾಮದ ಎಂ ಕೆ ಹರೀಶ, ನಾಗರ ಕೊಡುಗೆ ವಾಸಿಗಳಾದ ಚಿದಾನಂದ ಮತ್ತು ಅರುಣ್ ಕುಮಾರ್ ಎಂಬುವರನ್ನು ಬಂಧಿಸಿದ್ದಾರೆ.

ಕರ್ನಾಟಕ ಅರಣ್ಯ ಕಾಯ್ದೆ 1963ರ ಕಲಂ 24 (ಇ), 62, 84, 86, 87,71(ಎ) ಮತ್ತು ಕರ್ನಾಟಕ ಅರಣ್ಯ ನಿಯಮ 144, 165 ರ ಉಲ್ಲಂಘನೆ ಆಗಿರುವುದರಿಂದ ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಲಾಗಿದೆ.

ಈ ದಾಳಿಯಲ್ಲಿ ಅಂದಾಜು ರೂ.30,000 ಮೌಲ್ಯದ 2 ಕೆ.ಜಿ ಪರಿವರ್ತಿತ ಗಂಧ ಹಾಗೂ 21.690 ತಿಪ್ಪೆ ಸಹಿತ ನಾಲ್ಕು ಶ್ರೀಗಂಧದ ತುಂಡುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಒಂದು  ಬಜಾಜ್ ಸಿಟಿ 100  ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸಂಜಯ್ ರವರ ಮಾರ್ಗದರ್ಶನದಲ್ಲಿ ಡಿ ಆರ್ ಎಫ್ ಓ  ನರೇಂದ್ರ,ಪ್ರವೀಣ್, ಅಮೃತ್ ಸುಂಕೋಡ್, ಸತೀಶ್, ಯುವರಾಜ್, ಹಾಲೇಶ್ ಹಾಗೂ ಸಿಬ್ಬಂದಿಗಳಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

4 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

4 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

6 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

7 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

10 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

10 hours ago