ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹಳ್ಳಕ್ಕೆ ಉರುಳಿರುವ ಘಟನೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮದ ಬಳಿ ನಡೆದಿದೆ.
ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಬೋರ್ ವೆಲ್ ಕೊರೆಯುವ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ.ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.
ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಯ ಆಗಿರುವುದಿಲ್ಲ ಎಂದು ತಿಳಿದುಬಂದಿದೆ.
ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.