Hosanagara | ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆಯನ್ನು ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್

ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆ ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್


“ಸರ್ಕಾರಿ ಶಾಲೆ ಅಭಿಮಾನ – ಸುಣ್ಣಬಣ್ಣ ಅಭಿಯಾನದ ಮತ್ತೊಂದು ಶಾಲೆಗೆ ಚಾಲನೆ ನೀಡಿದ ಸಿಪಿಐ ಗುರಣ್ಣ ಹೆಬ್ಬಾಳ್ಕರ್

ಹೊಸನಗರ : ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ  ಶಾಲೆಗಳನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರ ಮೇಲಿದೆ. ಸರ್ಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯಗಳು ಲಭ್ಯವಾಗುತ್ತಿದ್ದು, ಇದರತ್ತ ಹೆಚ್ಚಿನ ಗಮನಹರಿಸಬೇಕೆಂದು ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೇಳಿದರು.


ಪಟ್ಟಣದ ಮಾವಿನಕೊಪ್ಪ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ಶಾಲೆಯ ಅಭಿಮಾನ,  ಸುಣ್ಣ ಬಣ್ಣದ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾನವನ ಜೀವಿತದಲ್ಲಿ ಅತ್ಯಂತ ಪವಿತ್ರವಾದ ಸ್ಥಳ ಶಾಲೆಯಾಗಿದ್ದು. ಶಾಲೆಯಲ್ಲಿ ಕಲಿತ ಪಾಠ ಪ್ರವಚನಗಳು, ಬದುಕಿನ ದಿಕ್ಕನ್ನೇ ಬದಲಾಯಿಸುವಂತಹ ಅದ್ಭುತವಾದ ಶಕ್ತಿಯನ್ನು ಹೊಂದಿರುತ್ತದೆ,ಕನ್ನಡದ ಶಾಲೆಯ ಬಗ್ಗೆ ಅಭಿಮಾನವನ್ನು ಹೊಂದಿ ಅದರಲ್ಲೂ ಸರ್ಕಾರಿ ಶಾಲೆಗಳ ಬಗ್ಗೆ ಗಮನಹರಿಸಿ ಸುಣ್ಣ ಬಣ್ಣದ ಜೊತೆಗೆ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಅಭಿವೃದ್ಧಿಗೆ  ಸಹಕಾರ ನೀಡುತ್ತಿರುವ ಪೋಸ್ಟ್ ಮ್ಯಾನ್  ಬಳಗದ ಕನ್ನಡ ಶಾಲೆಯ ಅಭಿಮಾನ ಸುಣ್ಣ ಬಣ್ಣದ ಅಭಿಯಾನ ಕಾರ್ಯಕ್ರಮ ನಿರಂತರವಾಗಿರಲಿ ಹಾಗೆಯೇ ಅವರುಗಳು ಶೈಕ್ಷಣಿಕ ಅಭಿವೃದ್ಧಿಗೆ ಸಮಾಜಕ್ಕೆ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.


ಮಲೆನಾಡು ವಾಯ್ಸ್ ಪತ್ರಿಕೆಯ ಸಂಪಾದಕ ನಗರ ರಾಘವೇಂದ್ರ ಮಾತನಾಡಿ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಆಗಲು ಮುಖ್ಯವಾಗಿ ಶಾಲೆಗಳ ಮೂಲ ಸೌಕರ್ಯ ಕೊರತೆಯೂ ಕಾರಣವಾಗಿದೆ. ಹಲವು ಕಡೆ ವಾಹನ ಸಂಪರ್ಕ ಇಲ್ಲದೇ ಕಿಮೀ ಗಟ್ಟಲೆ ನಡೆದುಕೊಂಡು ಶಾಲೆಗೆ ಬರುವ ಸ್ಥಿತಿ ಇದೆ. ಇದರಿಂದಾಗಿ ಮಕ್ಕಳ ಪಾಲಕರಿಗೆ ಜಾಗೃತಿ ಮೂಡಿಸುವ ಕಾರ್ಯ ಆಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರವು ಕಾರ್ಯ ಪ್ರವೃತ್ತವಾಗುವುದು ಮುಖ್ಯವಾಗಿದೆ ಎಂದರು.

ಈ ಸಂಧರ್ಭದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ಸಂಪಾದಕ ರಫ಼ಿ ರಿಪ್ಪನ್‌ಪೇಟೆ , ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ವೆಂಕಟೇಶಮೂರ್ತಿ,ಪೋಸ್ಟ್ ಮ್ಯಾನ್ ಬಳಗದ ಉಮೇಶ್ ಜಾಗದ್ದೆ,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಗುರುರಾಜ್, ಮುಖ್ಯಶಿಕ್ಷಕರಾದ ಕುಬೇರಪ್ಪ ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

7 hours ago

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು Shivamogga court sentences…

10 hours ago

ಸಾಗರದಲ್ಲಿ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾರು ಪಲ್ಟಿ

ಸಾಗರದಲ್ಲಿ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾರು ಪಲ್ಟಿ Scorpio car overturns near Ganapathi Kere in Sagara after…

10 hours ago

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ ಡಿಟೇಲ್ಸ್

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ…

20 hours ago

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…

1 day ago

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…

1 day ago