ತೀರ್ಥಹಳ್ಳಿಯಲ್ಲಿ ಮಾನಸಿಕ ವ್ಯಕ್ತಿಯಿಂದ ಸಾರ್ವಜನಿಕರಿಗೆ ಕಿರಿಕಿರಿ ! ನಿಮಾನ್ಸ್ ಆಸ್ಪತ್ರೆಗೆ ರವಾನೆ !! | Thirthahalli
ತೀರ್ಥಹಳ್ಳಿಯಲ್ಲಿ ಮಾನಸಿಕ ವ್ಯಕ್ತಿಯ ಹುಚ್ಚಾಟ ! ನಿಮಾನ್ಸ್ ಆಸ್ಪತ್ರೆಗೆ ರವಾನೆ! ತೀರ್ಥಹಳ್ಳಿ: ಪಟ್ಟಣದಲ್ಲಿ ಹುಚ್ಚನೊಬ್ಬ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದು ಹುಚ್ಚಾಟ ಮೆರೆಯುತ್ತಿದ್ದ ಹಿನ್ನಲೆಯಲ್ಲಿ ಸ್ಥಳೀಯ ಪ್ರಮುಖರು, ಪೊಲೀಸ್ ಇಲಾಖೆ ನೆರವಿನೊಂದಿಗೆ ಆತನನ್ನು ನಿಮಾನ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಆತ ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆ ಕಿರಿಕಿರಿ ಮಾಡುತ್ತಿದ್ದಾನೆ. ಇದರಿಂದ ಪಟ್ಟಣದಲ್ಲಿ ಓಡಾಡಲು ಜನರು ಸಂಕಷ್ಟ ಅನುಭವಿಸುವಂತಾಗಿದೆ. ರಸ್ತೆ ಮಧ್ಯ ನಿಂತು ಕೂಗಾಡುತ್ತಾ ಇನ್ನು ಯುವತಿಯರಿಗೆ ಕೂಡ ಕೀಟಲೆ ನೀಡುತ್ತಿದ್ದು, ಇದರಿಂದ ಯುವತಿಯರಿಗೆ ರಸ್ತೆಯಲ್ಲಿ ಓಡಾಡಲು ಆಗುತ್ತಿಲ್ಲ. ಈತನ ಅಸಭ್ಯ…