RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ

ರಿಪ್ಪನ್‌ಪೇಟೆ : ವಾಹನ ಚಲಾಯಿಸುವ ವೇಳೆ ರಸ್ತೆ ಸುರಕ್ಷತೆಯ ನಿಯಮವನ್ನು ಪಾಲಿಸದೆ ಇರುವುದು ನಿಮಗೆ ನೀವೇ ದ್ರೋಹ ಮಾಡಿದ ಹಾಗೆ. ರಸ್ತೆ ಸುರಕ್ಷತೆಯ ಬಗ್ಗೆ ಯುವಜನತೆ ಪಾಲಿಸದೆ ಇರುವುದರಿಂದ ಹೆಚ್ಚಿನ ವಾಹನ ಅಪಘಾತಗಳಾಗಿ ಸಾವು ಸಂಭವಿಸುತ್ತದೆ. ಈ ನಿಟ್ಟಿನಲ್ಲಿ ವಾಹನ ಚಲಾಯಿಸವವರು ಜಾಗರೂಕರಾಗಬೇಕು ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು.
ಪಟ್ಟಣದಲ್ಲಿ ರಸ್ತೆ ಸುರಕ್ಷತೆ ಹಾಗೂ ಅಪರಾಧ ತಡೆ ಮಾಸ ಜಾಗೃತಿ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಆಶ್ರಯದಲ್ಲಿ ನಡೆದ ಬೈಕ್ ರ್‍ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿ ರಸ್ತೆಯಲ್ಲಿ ವಾಹನ ಚಲಾಯಿಸುವವರು ತಮ್ಮ ಸುರಕ್ಷತೆಯ ಜತೆಗೆ ವಾಹನಗಳ ದಾಖಲೆಗಳನ್ನು ಇಟ್ಟುಕೊಳ್ಳಬೇಕು, ಅಪ್ರಬುದ್ಧ ಮಕ್ಕಳು ವಾಹನ ಚಲಾಯಿಸಿದರೆ ಅವರ ಹೆತ್ತವರ ಹೊಣೆಗಾರರಗುವುದು ಮಾತ್ರವಲ್ಲದೆ ಶಿಕ್ಷಕಾರ್ಹರು ಎಂದರು
ಇತ್ತೀಚಿನ ದಿನಗಳಲ್ಲಿ ಅಂತರ್ಜಾಲದ ಮೂಲಕ ಜನರನ್ನು ಯಾಮಾರಿಸುವ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಇದರಲ್ಲಿ ಯುವಜನರು ಬಲಿಯಾಗುತಿದ್ದಾರೆ. ಈ ನಿಟ್ಟಿನಲ್ಲಿ ಜಾಗೃತಿ ವಹಿಸಬೇಕಾಗಿದೆ ಎಂದು ಕರೆ ನೀಡಿದರು.

ಪಟ್ಟಣದ ಪ್ರಮುಖ ನಾಲ್ಕು ರಸ್ತೆಗಳಲ್ಲಿ ಡಿವೈಎಸ್ಪಿ ಗಜಾನನ ವಾಮನ ಸುತಾರ ರವರ ನೇತೃತ್ವದಲ್ಲಿ  ಬೈಕ್ ರ್ಯಾಲಿ ನಡೆಸಲಾಯಿತು
ಈ ಸಂಧರ್ಭದಲ್ಲಿ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ಸಿಬ್ಬಂದಿಗಳಾದ ಶಿವಕುಮಾರ್ ನಾಯ್ಕ್ , ಉಮೇಶ್ ,ಮಧುಸೂಧನ್  ಸೇರಿದಂತೆ ಸಿಬ್ಬಂದಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *