RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್ಯಾಲಿ – ಡಿವೈಎಸ್ಪಿ ಭಾಗಿ
ರಿಪ್ಪನ್ಪೇಟೆ : ವಾಹನ ಚಲಾಯಿಸುವ ವೇಳೆ ರಸ್ತೆ ಸುರಕ್ಷತೆಯ ನಿಯಮವನ್ನು ಪಾಲಿಸದೆ ಇರುವುದು ನಿಮಗೆ ನೀವೇ ದ್ರೋಹ ಮಾಡಿದ ಹಾಗೆ. ರಸ್ತೆ ಸುರಕ್ಷತೆಯ ಬಗ್ಗೆ ಯುವಜನತೆ ಪಾಲಿಸದೆ ಇರುವುದರಿಂದ ಹೆಚ್ಚಿನ ವಾಹನ ಅಪಘಾತಗಳಾಗಿ ಸಾವು ಸಂಭವಿಸುತ್ತದೆ. ಈ ನಿಟ್ಟಿನಲ್ಲಿ ವಾಹನ ಚಲಾಯಿಸವವರು ಜಾಗರೂಕರಾಗಬೇಕು ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು.
ಪಟ್ಟಣದಲ್ಲಿ ರಸ್ತೆ ಸುರಕ್ಷತೆ ಹಾಗೂ ಅಪರಾಧ ತಡೆ ಮಾಸ ಜಾಗೃತಿ ಕಾರ್ಯಕ್ರಮದ ಅಂಗವಾಗಿ ರಿಪ್ಪನ್ಪೇಟೆ ಪೊಲೀಸ್ ಠಾಣೆ ಆಶ್ರಯದಲ್ಲಿ ನಡೆದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿ ರಸ್ತೆಯಲ್ಲಿ ವಾಹನ ಚಲಾಯಿಸುವವರು ತಮ್ಮ ಸುರಕ್ಷತೆಯ ಜತೆಗೆ ವಾಹನಗಳ ದಾಖಲೆಗಳನ್ನು ಇಟ್ಟುಕೊಳ್ಳಬೇಕು, ಅಪ್ರಬುದ್ಧ ಮಕ್ಕಳು ವಾಹನ ಚಲಾಯಿಸಿದರೆ ಅವರ ಹೆತ್ತವರ ಹೊಣೆಗಾರರಗುವುದು ಮಾತ್ರವಲ್ಲದೆ ಶಿಕ್ಷಕಾರ್ಹರು ಎಂದರು
ಇತ್ತೀಚಿನ ದಿನಗಳಲ್ಲಿ ಅಂತರ್ಜಾಲದ ಮೂಲಕ ಜನರನ್ನು ಯಾಮಾರಿಸುವ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಇದರಲ್ಲಿ ಯುವಜನರು ಬಲಿಯಾಗುತಿದ್ದಾರೆ. ಈ ನಿಟ್ಟಿನಲ್ಲಿ ಜಾಗೃತಿ ವಹಿಸಬೇಕಾಗಿದೆ ಎಂದು ಕರೆ ನೀಡಿದರು.
ಪಟ್ಟಣದ ಪ್ರಮುಖ ನಾಲ್ಕು ರಸ್ತೆಗಳಲ್ಲಿ ಡಿವೈಎಸ್ಪಿ ಗಜಾನನ ವಾಮನ ಸುತಾರ ರವರ ನೇತೃತ್ವದಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು
ಈ ಸಂಧರ್ಭದಲ್ಲಿ ಪಟ್ಟಣದ ಪಿಎಸ್ಐ ಪ್ರವೀಣ್ ಎಸ್ ಪಿ ಸಿಬ್ಬಂದಿಗಳಾದ ಶಿವಕುಮಾರ್ ನಾಯ್ಕ್ , ಉಮೇಶ್ ,ಮಧುಸೂಧನ್ ಸೇರಿದಂತೆ ಸಿಬ್ಬಂದಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಇದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್