ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳ ಸಹಕಾರಿ – ಪಿಎಸ್‌ಐ ಪ್ರವೀಣ್
ರಿಪ್ಪನ್‌ಪೇಟೆ : ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು.
ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಹಿಂದೂ ಮಹಾಸಭಾ ಪ್ರಾಂಗಣದಲ್ಲಿ ಕೆ ಎಸ್. ಹೆಗ್ಡೆ ಆಸ್ಪತ್ರೆ,ಮಂಗಳೂರು ಹಾಗೂ ಸಾಗರದ ನವಚೇತನ ವೇದಿಕೆ (ರಿ.) ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿ ಈ ಹಿಂದಿನ ದಿನಗಳಲ್ಲಿ ನಮ್ಮಲ್ಲಿವಾಂತಿ-ಬೇದಿ, ಟೈಫಾಯಿಡ್, ಕ್ಷಯ, ಕಾಲಾರದಂತಹ ರೋಗಗಳು ಸಾಮಾನ್ಯವಾಗಿದ್ದವು.ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬಿಪಿ, ಶುಗರ್, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ. ಇವು ಶ್ರೀಮಂತ ಖಾಯಿಲೆಗಳಾಗಿದ್ದು, ಬಡಜನರು ಆರ್ಥಿಕವಾಗಿ ಭರಿಸಲು ಅಸಾಧ್ಯ. ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ನವಚೇತನ ವೇದಿಕೆಯ ಪ್ರಶಾಂತ್ ಕೆ ಜಿ ಶಿವಪ್ಪ ಗ್ರಾಮೀಣ ಭಾಗದ ಬಡವರ,ಸಾಮಾನ್ಯರ ಪಾಲಿಗೆ ಇಂತಹ ವೈದ್ಯಕೀಯ ಶಿಬಿರವು ಉಪಯುಕ್ತವಾಗಿದೆ. ಕೋವಿಡ್ ನಂತರ ಆರೋಗ್ಯ ಸೇವೆಯಲ್ಲಿ ಅನೇಕ ಬದಲಾವಣೆಗಳನ್ನು ಕಂಡಿದ್ದೇವೆ. ಮುಂದಿನ ದಿನಗಳಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರವನ್ನು ಹೆಚ್ಚೆಚ್ಚು ಮಾಡುವ ಸದುದ್ದೇಶವಿದೆ. ಆರೋಗ್ಯದಲ್ಲಿ ಮುಂದೆ ಬರಬಹುದಾದ ಸವಾಲುಗಳಿಗೆ ಇಂದೇ ಸೂಕ್ತ ಪರಿಹಾರ ಕಂಡುಕೊಳ್ಳಲು ಇಂತಹ ಶಿಬಿರ ಸಹಕಾರಿಯಾಗಿದೆ ಸಾವ೯ಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ , ಉಪಾಧ್ಯಕ್ಷ ಸುಧೀಂದ್ರ ಪೂಜಾರಿ , ಮುಖಂಡರಾದ ಆರ್ ಟಿ ಗೋಪಾಲ್ ,ಆರ್ ಎನ್ ಮಂಜುನಾಥ್ ,ಗ್ರಾಪಂ ಸದಸ್ಯರಾದ ಆಸೀಫ಼್ ಭಾಷಾ , ನಿರೂಪ್ ಕುಮಾರ್ , ದೇವಸ್ಥಾನ ಸಮಿತಿ ಅಧ್ಯಕ್ಷ ಈಶ್ವರ್ ಶೆಟ್ಟಿ ,ಪ್ರಶಾಂತ್ ತಳಲೆ , ಪ್ರವೀಣ್ ಆಚಾರ್ , ಸಂದೇಶ್ ,ಶಿಬಿರ ಸಂಯೋಜಕ ಅಜಿತ್ ಹಾಗೂ ಜೈಸನ್ ಇದ್ದರು.
250 ಕ್ಕೂ ಹೆಚ್ಚು ರೋಗಿಗಳು ತಪಾಸಣೆಯಲ್ಲಿ ಭಾಗವಹಿಸಿದ್ದರು. ಉಚಿತವಾಗಿ ಔಷಧ ವಿತರಿಸಲಾಯಿತು.
ಈ ಶಿಬಿರದಲ್ಲಿ ಖ್ಯಾತ ವೈದ್ಯರುಗಳಾದ ಡಾ| ವಾಧೀಶ ಭಟ್ (ಕಿವಿ ಮೂಗು ಗಂಟಲು ತಜ್ಞರು) ಡಾ| ಶ್ರೀಧೀಶ್ ಕೆ. (ಎಲುಬು ಮತ್ತು ಕೀಲು ತಜ್ಞರು)ಡಾ। ನೇಹಾಲ್ ಕೆ. ಎಮ್ (ವೈದ್ಯಕೀಯ ತಜ್ಞರು)
ಡಾ| ಡಾನಿಯ ಹಮೀದ್ (ಮಕ್ಕಳ ತಜ್ಞರು) ಡಾ ಸಂಜಿತಾ ಕಾಮತ್ (ಶಸ್ತ್ರಚಿಕಿತ್ಸಾ ತಜ್ಞರು) ಇದ್ದರು.