Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Ripponpete | ಅಡಿಕೆ,ರಬ್ಬರ್ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು
ರಿಪ್ಪನ್‌ಪೇಟೆ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ,ರಬ್ಬರ್ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಾದ ಪ್ರವೀಣ್ ಶಿವಪುರ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ನನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ತಿಂಗಳು ನಡೆದ ಕಳ್ಳತನದ ಪ್ರಕರಣವನ್ನು ಬೆನ್ನತ್ತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತೃತ್ವದ ಸಿಬ್ಬಂದಿಗಳ ತಂಡ ನವೆಂಬರ್ 27 ರಂದು ಮಲೆನಾಡಿಗರಿಗೆ ತಲೆ ನೋವಾಗಿದ್ದ ಬೃಹತ್ ಕಳ್ಳರ ಜಾಲವೊಂದನ್ನು ಪತ್ತೆ ಹಚ್ಚಿ ಇಬ್ಬರನ್ನು ಬಂದಿಸಿದ್ದರು.ಆದರೆ ಪ್ರಕರಣದಲ್ಲಿ ಬೇಕಾಗಿದ್ದ ಪ್ರಮುಖ ಆರೋಪಿಗಳು ಪರಾರಿಯಾಗಿದ್ದರು.

ಪರಾರಿಯಾಗಿದ್ದ ಕಳ್ಳರ ಪತ್ತೆಗೆ ಜಾಲ ಬೀಸಿದ್ದ ಪೊಲೀಸರು ಗುರುವಾರ ರಾತ್ರಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣದ ಮೂರನೇ ಆರೋಪಿ ಪ್ರತಾಪ್ ನನ್ನು ಹಾಗೂ ಎರಡನೇ ಮತ್ತು ನಾಲ್ಕನೇ ಆರೋಪಿಗಳಾದ ಪ್ರವೀಣ್ ಶಿವಪುರ ಹಾಗೂ ನಾಗಭೂಷಣ ನನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಎರಡನೇ ಆರೋಪಿ ಪ್ರವೀಣ್ ಶಿವಪುರ ಮನೆ ಕಳ್ಳತನ ಮಾಡಿ ಕಳೆದ ನಾಲ್ಕೈದು ತಿಂಗಳಿನಿಂದ ತಲೆಮರೆಸಿಕೊಂಡಿದ್ದನು.

ಈ ಪ್ರಕರಣದಲ್ಲಿ ಈಗಾಗಲೇ ರಾಘವೇಂದ್ರ @ರಾಘು ಹರತಾಳು, ಶ್ರೀಧರ್ ನಂಜವಳ್ಳಿ ರವರನ್ನು ಬಂಧಿಸಿ ಅಂದಾಜು ಒಂದು ಲಕ್ಷಕ್ಕೂ ಹೆಚ್ಚು ಮೌಲ್ಯದ ಅಡಿಕೆ ಹಾಗೂ 50 ಸಾವಿರಕ್ಕೂ ಹೆಚ್ಚು ಮೌಲ್ಯದ ರಬ್ಬರ್ ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ಅಮಾನತ್ತು ಪಡಿಸಿಕೊಳ್ಳಲಾಗಿತ್ತು.

ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಶಿವಕುಮಾರ್ ನಾಯ್ಕ್ , ಉಮೇಶ್ , ಸಂತೋಷ್ ಕೊರವರ ಮತ್ತು ಮಧುಸೂಧನ್ ಪಾಲ್ಗೊಂಡಿದ್ದರು.
ಕಳ್ಳ ಕಾಕರ ವಿರುದ್ದ ಖಡಕ್ ಸಮರ ಸಾರಿರೋ ಪಿಎಸ್‌ಐ ಪ್ರವೀಣ್ ಯಾರೊಬ್ಬರಿಗೂ ಸೊಪ್ಪು ಹಾಕುತ್ತಿಲ್ಲ. ಅದ್ಯಾರೇ ಭ್ರಷ್ಟರ ಪರ ವಕಾಲತ್ತು ವಹಿಸಿದ್ರೂ ಯಾರಂದ್ರೆ ಯಾರಿಗೂ ಕ್ಯಾರೇ ಅಂತಿಲ್ಲ. ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ದಂಧೆ,ಕಳ್ಳತನ ,ಭ್ರಷ್ಟಾಚಾರ ಗಳ ಹಾವಳಿ ನಿಯಂತ್ರಣಕ್ಕೆ ತೊಡೆ ತಟ್ಟಿ ನಿಂತಿದ್ದಾರೆ.ಪಟ್ಟಣದ ಪೊಲೀಸ್ ಠಾಣೆ ಸದ್ಯ ಒಂದಿಷ್ಟು ಜನಸ್ನೇಹಿ ಆಗಿ ಬದಲಾಗಿದೆ. ಅದ್ಯಾವುದೇ ಬಲಿಷ್ಟ ಕೈಗಳ ಪ್ರಭಾವಗಳೂ ಇಲ್ಲಿ ಲೆಕ್ಕಕ್ಕೆ ಬರೋದೇ ಇಲ್ಲ. ಬಹುತೇಕ ಅದೇನಾಗಬೇಕೋ ಅದೇಲ್ಲ ಕಾನೂನಾತ್ಮಕವಾಗಿಯೇ ನಡೀತಿದೆ.

ಒಟ್ಟಾರೆಯಾಗಿ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಭಾಗದಲ್ಲಿ ರೈತರು ಕಷ್ಟಪಟ್ಟು ಬೆಳೆದ ಬೆಳೆಗೆ ಕಂಟಕಪ್ರಾಯವಾಗಿದ್ದ ಈ ಕಳ್ಳರ ಜಾಲವನ್ನು ಪತ್ತೆ ಹಚ್ಚಿದ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳ ತಂಡಕ್ಕೆ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

9 hours ago

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು Shivamogga court sentences…

11 hours ago

ಸಾಗರದಲ್ಲಿ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾರು ಪಲ್ಟಿ

ಸಾಗರದಲ್ಲಿ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾರು ಪಲ್ಟಿ Scorpio car overturns near Ganapathi Kere in Sagara after…

11 hours ago

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ ಡಿಟೇಲ್ಸ್

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ…

21 hours ago

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…

1 day ago

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…

1 day ago