Ripponpete | ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ : ಆದರ್ಶ ಗೌಡ ಪಿ ಎನ್
ರಿಪ್ಪನ್‌ಪೇಟೆ : ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಆದರ್ಶ ಗೌಡ ಪಿ ಎನ್ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಿಪ್ಪನ್ ಪೇಟೆ ಯುವ ರೆಡ್ ಕ್ರಾಸ್ ಘಟಕ ಹಾಗೂ ಸಿಮ್ಖಾನ್ ಫೌಂಡೇಶನ್ ಮತ್ತು ಸೋಶಿಯಲ್ ವೆಲ್ಫೇರ್ ಟ್ರಸ್ಟ್ ವತಿಯಿಂದ ನಡೆದ ಅತಿಯಾದ ಮೊಬೈಲ್ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಜಾಗೃತಿ ಕಾರ್ಯಗಾರದಲ್ಲಿ ಮಾತನಾಡುತ್ತಾ ಮೊಬೈಲ್ ನ ಅತಿಯಾದ ಬಳಕೆಯಿಂದ ಅನೇಕ ರೀತಿಯ ಮಾನಸಿಕ,ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ವ್ಯಕ್ತಿಯೊಬ್ಬ ಮೊಬೈಲ್ ಬಳಸುವಾಗ, ಹೆಚ್ಚಿನ ಬಿಸಿ ತಲೆಯ ಭಾಗದಲ್ಲಿ ಕಾಣಿಸಿಕೊಳ್ಳುತ್ತದೆ ಇದರಿಂದ ರಕ್ತ ಪರಿಚಲನೆ ವ್ಯತ್ಯಾಸವಾಗಿ ದೇಹದ ತಾಪಮಾನ ಹೆಚ್ಚಾಗುತ್ತದೆ ಇದು ಮೆದುಳಿನ ಆರೋಗ್ಯಕ್ಕೆ ಹಾನಿಕಾರಕ. ಮೊಬೈಲ್ ಸರಿಯಾಗಿ ಬಳಸದಿದ್ದರೆ ಕ್ಯಾನ್ಸರ್ ಗೆ ತುತ್ತಾಗಬೇಕಾಗುತ್ತದೆ ಎಂದು ತಿಳಿಸಿದರು.ಮೊಬೈಲ್ ಇಂದು ಅತ್ಯಾವಶ್ಯಕ ಸಾಧನ ಆದರೂ ಅದನ್ನು ಇತಿಮಿತಿಯಿಂದ ಬಳಸಿದರೆ ಒಳಿತು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ತಿಳಿಸಿದರು. ನಾವೆಲ್ಲರೂ ಶಿಕ್ಷಣದಲ್ಲಿ ಮಾತ್ರ ವಿದ್ಯಾವಂತರಾಗಿದ್ದೇವೆ ಆದರೆ ಮೊಬೈಲ್ ಬಳಕೆಯಲ್ಲಿ ಅವಿದ್ಯಾವಂತರು ಎಂದು ತಿಳಿಸಿದರು. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅಭಿವೃದ್ಧಿಗೆ ಸೀಮಿತಗೊಳಿಸಿ ಮೊಬೈಲ್ ಬಳಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಚಂದ್ರಶೇಖರ್ ಟಿ. ವಹಿಸಿದ್ದರು ಸಂಪನ್ಮೂಲ ವ್ಯಕ್ತಿಗಳಾಗಿ ಸಿಮ್ ಖಾನ್ ಫೌಂಡೇಶನ್ ನಿರ್ದೇಶಕರಾದ ಆದರ್ಶ ಗೌಡ ಪಿ ಎನ್ ರವರು ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕರಾದ ರಾಜು ಆರ್. ಕೆ. ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ರಾಜು ಬಿ ಎಲ್ ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಹರ್ಷ ಕುಮಾರ್ ಕೆ ಆರ್ ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವೃಂದ ಭಾಗವಹಿಸಿದ್ದರು.